ಸುಳ್ಯ

ಮರ್ಕಂಜ: ಮಿನುಂಗೂರು ದುರ್ಗಾಪರಮೇಶ್ವರಿಯ ಕಾಣಿಕೆ ಹುಂಡಿಯಿಂದ ಹಣ ದೋಚಿದ ಕಳ್ಳರು..!, ಸ್ಥಳಕ್ಕೆ ಆಗಮಿಸಿದ ಪೊಲೀಸರು

ನ್ಯೂಸ್ ನಾಟೌಟ್: ಮರ್ಕಂಜದ ಅತ್ಯಂತ ಕಾರ್ಣಿಕ ಕ್ಷೇತ್ರವಾಗಿರುವ ಶ್ರೀ ಮಿನುಂಗೂರು ದುರ್ಗಾಪರಮೇಶ್ವರಿ ದೇವಸ್ಥಾನದ ಕಾಣಿಕೆ ಹುಂಡಿಯಿಂದ ಕಳ್ಳರು ನಗದು ದೋಚಿ ಪರಾರಿಯಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಈ ಪ್ರಕರಣ ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಸುಮಾರು ನಾಲ್ಕು ಸಾವಿರ ಹಣವನ್ನು ದೋಚಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ತನಿಖೆ ನಡೆಯುತ್ತಿದೆ. ಇತ್ತೀಚೆಗೆ ದೇವಸ್ಥಾನದ ಹುಂಡಿಯಲ್ಲಿದ್ದ ಹಣವನ್ನು ತೆಗೆದು ದೇವಸ್ಥಾನದ ಖಾತೆಗೆ ಹಾಕಲಾಗಿತ್ತು. ಹೀಗಾಗಿ ಭಾರಿ ಮೊತ್ತದ ಹಣ ಕಳ್ಳರಿಗೆ ಸಿಗಲಿಲ್ಲ ಎನ್ನಲಾಗಿದೆ.

Related posts

ಸುಳ್ಯ : ಪೈಚಾರು ಶಾಂತಿನಗರ ಮುತ್ತಪ್ಪ ತಿರುವಪ್ಪ ದೈವಸ್ಥಾನದಲ್ಲಿ ನೇಮೋತ್ಸವ ಸಂಭ್ರಮ

ಸುಳ್ಯ ತಾಲೂಕು ಮೊಗೇರ ಯುವ ವೇದಿಕೆಯ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ

ಗುತ್ತಿಗಾರು: ಕಣ್ಣಿನ ಉಚಿತ ತಪಾಸಣೆ ಮತ್ತು ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ, ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಇತರ ಸಂಘ ಸಂಸ್ಥೆಗಳ ಸಹಯೋಗ