Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಅಪ್ರಾಪ್ತೆಯರ ಕಿಡ್ನ್ಯಾಪ್‌ ಮಾಡಿದ ಗ್ಯಾಂಗ್..! ಗ್ಯಾಂಗ್‌ ರೇಪ್‌ ಮಾಡಿದ 4 ಮಂದಿ ಅರೆಸ್ಟ್..!

556

ನ್ಯೂಸ್ ನಾಟೌಟ್: ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ 14 ಮತ್ತು 15 ವರ್ಷ ಇಬ್ಬರು ಹುಡುಗಿಯರನ್ನು ಅಪಹರಿಸಿ ನಾಲ್ವರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಗಂಜಾಂನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಎಲ್ಲಾ ಆರೋಪಿಗಳೂ ವಿಶಾಖಪಟ್ಟಣಂಗೆ ಎಸ್ಕೇಪ್‌ ಆಗಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.

ಘಟನೆ ಜೂನ್‌ 3ರಂದು ನಡೆದಿದೆ. ಇಬ್ಬರು ಹೆಣ್ಣುಮಕ್ಕಳು ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಿರ್ಜನ ಪ್ರದೇಶಕ್ಕೆ ಇಬ್ಬರನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ, ಜೊತೆಗೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ ಎಂದು ಬ್ರಹ್ಮಪುರ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಹುಡುಗಿಯರಿಗೆ ಮೊದಲು ಇಬ್ಬರು ಪುರುಷರು ಆಮಿಷವೊಡ್ಡಿದ್ದಾರೆ, ಈ ಪೈಕಿ ಒಬ್ಬ ಆರೋಪಿ ಸಂತ್ರಸ್ತೆಗೆ ಪರಿಚಯವಿದ್ದ. ಅವರೊಂದಿಗೆ ಇನ್ನಿಬ್ಬರು ಸೇರಿಕೊಂಡು ಅಪಹರಿಸಿದ ಬಳಿಕ ಕೃತ್ಯ ಎಸಗಿದ್ದಾರೆ ಅನ್ನೋದು ತಿಳಿದುಬಂದಿದೆ.

ಬಳಿಕ ವಿಷಯ ತಿಳಿದ ಪೋಷಕರು ಜೂನ್ 4 ರಂದು ದೂರು ದಾಖಲಿಸಿದ್ದಾರೆ, ಅದರನ್ವಯ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಲಾಯಿತು. ಜೂನ್ 6 ರಂದು ಬಾಲಕಿಯರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ನಂತರ ಬಾಲಕಿಯನ್ನು ಕೌನ್ಸೆಲಿಂಗ್‌ಗಾಗಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ.

95ನೇ ವಯಸ್ಸಿನಲ್ಲಿ ಹಸೆಮಣೆ ಏರಿದ ಅಜ್ಜ-ಅಜ್ಜಿ..! 70 ವರ್ಷ ಒಂದೇ ಮನೆಯಲ್ಲಿ ಇದ್ದುಕೊಂಡು ಮದುವೆಯಾಗದೆ ಜೀವಿಸುತ್ತಿದ್ದ ಜೋಡಿ..!

ಈ ಎತ್ತು ದಾಖಲೆಯ ಮೊತ್ತಕ್ಕೆ ಮಾರಾಟ..! ಆರತಿ ಬೆಳಗಿ, ಪೂಜೆ ಸಲ್ಲಿಸಿ ಬೀಳ್ಕೊಟ್ಟ ಮನೆಯವರು

See also  ಸುಳ್ಯ:ಎ.ಒ.ಎಲ್.ಇ. ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಗೌರಿಪುರಂ ದೇವಸ್ಥಾನಕ್ಕೆ ಭೇಟಿ: ಶಾಲು, ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಿದ ಆಡಳಿತ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget