ಕ್ರೈಂವೈರಲ್ ನ್ಯೂಸ್

ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ಮಚ್ಚಿನಿಂದ ಹೊಡೆದಾಟ..! ಪ್ರೀತಿಸಿ ಮದುವೆಯಾಗಿದ್ದ ವಧು,ವರ ಸಾವು..!

224

ನ್ಯೂಸ್ ನಾಟೌಟ್: ಪರಸ್ಪರ ಪ್ರೀತಿಸಿ ಬುಧವಾರ (ಆ.7) ಬೆಳಗ್ಗೆ ಮದುವೆಯಾದ ನವಜೋಡಿ, ಅದೇ ದಿನ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ನವವಧು-ವರ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಆಂಧ್ರದ ಬೈನಪಲ್ಲಿ ಗ್ರಾಮದ ಲಿಖಿತಾಶ್ರೀ (20) ಬುಧವಾರ ಮೃತಪಟ್ಟಿದ್ದಳು. ಚಂಬರಸನಹಳ್ಳಿಯ ನವೀನ್ (28) ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ (Bengaluru) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಬುಧವಾರ ದಾಖಲಾಗಿದ್ದ ನವೀನ್‌ ನನ್ನ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರಾತ್ರಿ ರವಾನಿಸಲಾಗಿತ್ತು.

ನವೀನ್ ಮತ್ತು ಲಿಖಿತಾಶ್ರೀ ಜೋಡಿ ಪರಸ್ಪರ ಒಪ್ಪಿ ಮದುವೆಯಾಗಿದ್ದರು. ಬುಧವಾರ ಮುಂಜಾನೆ ಹಿರಿಯರ ಸಮ್ಮುಖದಲ್ಲಿ ಚಂಬರಸನಹಳ್ಳಿಯಲ್ಲಿ ಮದುವೆಯಾದರು. ಮದುವೆ ಕೆಲಗಂಟೆಗಳ ನಂತರ ನವಜೋಡಿ ರೂಮಿಗೆ ಹೋಗಿದ್ದಾರೆ. ಬಳಿಕ ಮಚ್ಚಿನಿಂದ ಪರಸ್ಪರರ ಮೇಲೆ ಹಲ್ಲೆ ನಡೆಸಿಕೊಂಡಿದ್ದಾರೆ. ಮಾರಾಮಾರಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಲಿಖಿತಾಶ್ರೀ ಸಾವನ್ನಪ್ಪಿದ್ದಳು. ಗುರುವಾರ ವರನೂ ಸಾವನ್ನಪ್ಪಿದ್ದಾನೆ. ಈ ಸಾವಿನ ಬಗ್ಗೆ ಹಲವು ಅನುಮಾನಗಳಿದ್ದು, ಈ ಪ್ರಕರಣದಲ್ಲಿ ಮೂರನೇ ವ್ಯಕ್ತಿಯ ಕೈವಾಡದ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Click

https://newsnotout.com/2024/08/dog-droped-down-from-5-flood-baby-nomore-kannada-news/
https://newsnotout.com/2024/08/money-transfer-limit-increased-in-upi-kannada-news-riserve-bank/
See also  ಹೊಸ ವರ್ಷಕ್ಕೆ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್..? ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರಿ ವ್ಯತ್ಯಾಸ! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget