Latestಕರಾವಳಿಕ್ರೈಂಪುತ್ತೂರುರಾಜ್ಯವೈರಲ್ ನ್ಯೂಸ್

ಪುತ್ತೂರು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಕನ್ನಡ ಕೋಗಿಲೆ ಖ್ಯಾತಿಯ ಯುವ ಗಾಯಕಿ ಅಖಿಲಾ..! 3 ವರ್ಷಗಳ ಹಿಂದೆ ಅಮೆರಿಕ ನಿವಾಸಿ ಧನಂಜಯ್ ಜೊತೆ ವಿವಾಹ

4.2k

ನ್ಯೂಸ್ ನಾಟೌಟ್: ಕನ್ನಡ ಕೋಗಿಲೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡ ಅಖಿಲಾ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಚ್ಛೇದನಕ್ಕಾಗಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
3 ವರ್ಷಗಳ ಹಿಂದೆ ಅಮೆರಿಕ ನಿವಾಸಿ ಧನಂಜಯ್ ಶರ್ಮ ಜೊತೆ ಅಖಿಲಾ ಪಜಿಮಣ್ಣು ವಿವಾಹ ನೆರವೇರಿತ್ತು.

ಅಖಿಲಾ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನವರು. ಕಿರುತೆರೆ ಹಾಗೂ ಸೋಶಿಯಲ್ ಮೀಡಿಯಾ ಮೂಲಕ ಗಾಯಕಿಯಾಗಿ ಖ್ಯಾತಿ ಗಳಿಸಿದ್ದಾರೆ. ಸುಮಧುರ ಗಾಯನದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಈಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ.

ಗಾಯಕಿ ಅಖಿಲಾ ಪಜಿಮಣ್ಣು ಮತ್ತು ಪತಿ ಟಿ.ಆರ್ ಧನರಾಜ್ ಶರ್ಮಾ ಪರಸ್ಪರ ಒಪ್ಪಿ ಇದೇ ಜೂನ್ 12 ರಂದು ಪುತ್ತೂರು ಕೋರ್ಟ್‌ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಅಖಿಲಾ ಪಜಿಮಣ್ಣು ಮತ್ತು ಧನಂಜಯ್ ಶರ್ಮಾ ನಡುವೆ ಮಧ್ಯಸ್ಥಿಕೆಗೆ ಕಳೆದ ಆರು ತಿಂಗಳಿಂದ ಕೋರ್ಟ್ ಅವಕಾಶ ನೀಡಿತ್ತು. ಬುಧವಾರ (ಜೂನ್ 18) ಈ ದಂಪತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಮ್ಯೂಚುಯಲ್‌ ಡಿವೋರ್ಸ್ ಪಡೆಯಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆ್ಯಪಲ್, ಫೇಸ್‌ಬುಕ್, ಗೂಗಲ್ ನ 16 ಶತಕೋಟಿ ಪಾಸ್‌ ವರ್ಡ್ ಗಳ ಸೋರಿಕೆ..! ಸಂದೇಶಗಳಲ್ಲಿ ಬಂದ ಅಪರಿಚಿತ ಲಿಂಕ್ ಗಳನ್ನು ಕ್ಲಿಕ್ ಮಾಡದಂತೆ ಫೇಸ್ ಬುಕ್ ವಾರ್ನಿಂಗ್..!

See also  ದಿ ಕೇರಳ ಸ್ಟೋರಿ ಬಗ್ಗೆ ಸ್ಟಾರ್ ನಟನ ಅಸಮಾಧಾನ,ಜಗತ್ತನ್ನು ಒಂದುಗೂಡಿಸಬೇಕೇ ಹೊರತು ಒಡೆಯುವ ಕೆಲಸ ಮಾಡಬಾರದು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget