Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಮದುವೆಗೆ ಸಿದ್ದವಾಗಿದ್ದ ಯುವತಿ ಮೇಲೆ ಪ್ರಿಯಕರನಿಂದ ಆ್ಯಸಿಡ್ ದಾಳಿ..! ಮುಖ, ಭುಜ, ಕುತ್ತಿಗೆ ಮತ್ತು ದೇಹದ ಮೇಲ್ಭಾಗಕ್ಕೆ ತೀವ್ರ ಸುಟ್ಟ ಗಾಯ..!

647

ನ್ಯೂಸ್ ನಾಟೌಟ್: ಉತ್ತರ ಪ್ರದೇಶದಲ್ಲಿ ಭೀಕರ ಆ್ಯಸಿಡ್ ದಾಳಿ ಪ್ರಕರಣ ವರದಿಯಾಗಿದೆ. ಭಗ್ನ ಹುಚ್ಚು ಪ್ರೇಮಿಯೋರ್ವ ತಾನು ಪ್ರೀತಿಸಿದ ಯುವತಿ ಮೇಲೆಯೇ ಆ್ಯಸಿಡ್ ಎರಚಿದ್ದಾನೆ.

ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಮದುವೆಯಾಗಬೇಕಿದ್ದ 25 ವರ್ಷದ ಯುವತಿ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿದ್ದಾನೆ.
ಮೂಲಗಳ ಪ್ರಕಾರ ಬ್ಯಾಂಕಿನಿಂದ ಮನೆಗೆ ಹೋಗುತ್ತಿದ್ದಾಗ ಬೈಕ್‌ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆಕೆಯನ್ನು ತಡೆದಿದ್ದಾರೆ. ಈ ವೇಳೆ ಆರೋಪಿ ರಾಮ್ ಜನಮ್ ಸಿಂಗ್ ಪಟೇಲ್, ‘ನನಗೆ ಸಿಗದ ನೀನು ಇನ್ಯಾರಿಗೂ ಸಿಗಬಾರದು’ ಎಂದು ಹೇಳಿ ಆಕೆಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ ಎಂದು ಪ್ರಕರಣ ದಾಖಲಾಗಿದೆ.

ಗುರುವಾರ ಬ್ಯಾಂಕಿನಿಂದ 20,000 ರೂ.ಗಳನ್ನು ಡ್ರಾ ಮಾಡಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ, ಮೇ 27 ರಂದು ನಡೆಯಬೇಕಿದ್ದ ಆಕೆಯ ಮದುವೆ ನಿಲ್ಲಿಸುವ ಉದ್ದೇಶದಿಂದ ಆಕೆಯ ಮೇಲೆ ಆಸಿಡ್ ಎರಚಿದ್ದಾನೆ ಎನ್ನಲಾಗಿದೆ. ಮಹಿಳೆಯ ಮುಖ, ಭುಜ, ಕುತ್ತಿಗೆ ಮತ್ತು ದೇಹದ ಮೇಲ್ಭಾಗ ತೀವ್ರವಾಗಿ ಸುಟ್ಟ ಗಾಯಗಳಾಗಿವೆ.

ಆಕೆಯನ್ನು ಆಕೆಯ ಹಳ್ಳಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಪ್ರಾಥಮಿಕ ಚಿಕಿತ್ಸೆಯ ನಂತರ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಶೇ.60 ರಷ್ಟು ಸುಟ್ಟಗಾಯಗಳಿಗೆ ಒಳಗಾಗಿರುವ ಆಕೆ ಅಜಮ್‌ ಗಢದ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪಟೇಲ್ ಮತ್ತು ಇತರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಘಟನೆಯಲ್ಲಿ ಬಳಸಲಾದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಭಾರತೀಯ ಸೇನೆಯಲ್ಲಿ ಅಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳಿಲ್ಲದೆ ಆಯ್ಕೆ, 30 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವಿಜಯ್ ರಾಜಕೀಯದ ಬಗ್ಗೆ ಖ್ಯಾತ ನಟ ಅಜಿತ್ ಕುಮಾರ್ ಹೇಳಿಕೆ..! ರಾಜಕೀಯ ಎಂಟ್ರಿ ಬಗ್ಗೆ ಸುಳಿವು..?

See also  ಸುಳ್ಯ: ಹಠಾತ್ ಕುಸಿದು ಬಿದ್ದು ಯುವಕ ಸಾವು
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget