ಕ್ರೀಡೆ/ಸಿನಿಮಾಕ್ರೈಂವಿಡಿಯೋವೈರಲ್ ನ್ಯೂಸ್ಸಿನಿಮಾ

ಮಾರ್ಟಿನ್ ಚಿತ್ರದ ರಿವ್ಯೂ ಮಾಡಿದ್ದ ರೀಲ್ಸ್ ಸ್ಟಾರ್ ಗೆ ನಟ ಧ್ರುವ ಸರ್ಜಾ ಅಭಿಮಾನಿಗಳಿಂದ ತರಾಟೆ..! ಕ್ಷಮೆ ಯಾಚಿಸಿದ ಕಿರುಚಿತ್ರ ನಟ..! ಇಲ್ಲಿದೆ ವೈರಲ್ ವಿಡಿಯೋ

242

ನ್ಯೂಸ್ ನಾಟೌಟ್: ಖ್ಯಾತ ನಟ ಧ್ರುವಸರ್ಜಾ ಅವರ ಬಹು ನಿರೀಕ್ಷಿತ ಚಿತ್ರ ಮಾರ್ಟಿನ್ ಕುರಿತು ನೆಗೆಟಿವ್ ರಿವ್ಯೂ ಮಾಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ರೀಲ್ಸ್ ಹಾಗೂ ಕಿರುಚಿತ್ರ ನಟ ಸುಧಾಕರ್ ಗೌಡ ಇದೀಗ ಕ್ಷಮೆ ಕೋರಿದ್ದಾರೆ.

ಕಾಮಿಡಿ ವೀಡಿಯೋಗಳ ಮೂಲಕ ಗಮನ ಸೆಳೆದಿರುವ ನಟ ಸುಧಾಕರ್ ಗೌಡ, ‘ಮಾರ್ಟಿನ್’ ಸಿನಿಮಾ ನೋಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಈ ವೇಳೆ ಸಿನಿಮಾ ಚೆನ್ನಾಗಿಲ್ಲ, ಚಿತ್ರತಂಡವೇ ಥಿಯೇಟರ್‌ಗಳಲ್ಲಿ ಫೇಕ್ ಬುಕ್ಕಿಂಗ್ ಮಾಡಿಸುತ್ತಿದೆ ಎಂದು ಆರೋಪ ಮಾಡಿದ್ದರು.
ದಿಢೀರನೆ ಸುಧಾಕರ್ ಮಾಡಿದ್ದ ‘ಮಾರ್ಟಿನ್’ ರಿವ್ಯೂ ವೀಡಿಯೋ ವ್ಯಾಪಕ ವೈರಲ್ ಆಗಿತ್ತು. ಅಲ್ಲದೆ ನಟ ಧ್ರುವ ಸರ್ಜಾ ಅಭಿಮಾನಿಗಳು ಇದಕ್ಕೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು.

ಇನ್ನು ಅವರ ರೀವ್ಯೂ ವಿಡಿಯೋಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ನಟ ಸುಧಾಕರ್ ಗೌಡ ಮತ್ತೊಂದು ವೀಡಿಯೋ ಮಾಡಿ ಧ್ರುವ ಸರ್ಜಾ ಹಾಗೂ ಅವರ ಅಭಿಮಾನಿಗಳ ಕ್ಷಮೆ ಕೇಳಿದ್ದಾರೆ. ‘ಮಾರ್ಟಿನ್’ ಸಿನಿಮಾ ನೋಡಿ ನನಗೆ ಅನ್ನಿಸಿದ ಅಭಿಪ್ರಾಯವವನ್ನು ರಿವ್ಯೂ ವೀಡಿಯೋದಲ್ಲಿ ಹೇಳಿದ್ದೆ. ಆದರೆ ಅದು ಕೆಲವರಿಗೆ ಬೇಸರ ತಂದಿದೆ. ಹಾಗಾಗಿ ನಾನು ಅವರ ಕ್ಷಮೆ ಕೇಳುತ್ತೇನೆ. ನಾನು ಹೇಳಿದ್ದ ಕೆಲ ಅಂಶಗಳ ಬಗ್ಗೆ ಧ್ರವಸರ್ಜಾ ಅವರ ಅಭಿಮಾನಿಗಳು ಆಕ್ಷೇಪ ಎತ್ತಿದ್ದಾರೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಉದಯ್ ಕೆ ಮೆಹ್ತಾ ‘ಮಾರ್ಟಿನ್’ ಚಿತ್ರವನ್ನು ಬಹಳ ಅದ್ಧೂರಿಯಾಗಿ ನಿರ್ಮಿಸಿದ್ದಾರೆ. 75 ಕೋಟಿ ರೂ.ಗೂ ಅಧಿಕ ಮೊತ್ತದಲ್ಲಿ ಸಿನಿಮಾ ತೆರೆಗೆ ತರಲಾಗಿದೆ. ಅರ್ಜುನ್ ಸರ್ಜಾ ಚಿತ್ರಕ್ಕೆ ಕಥೆ ಬರೆದಿದ್ದಾರೆ.

Click

https://newsnotout.com/2024/10/actress-oviya-video-leak-case-kannada-news-viral-news-reaction/
https://newsnotout.com/2024/10/rathan-tata-benjamin-netanyahu-kannada-news/
https://newsnotout.com/2024/10/baby-the-inspector-adopted-the-baby-found-in-the-bush/
https://newsnotout.com/2024/10/sanjay-datt-in-kateel-durgaparameshwari-temple/
https://newsnotout.com/2024/10/vijayadashami-kannada-news-bjp-leader-distributed-sowrd-to-girls/
https://newsnotout.com/2024/10/9-year-old-girl-nomore-kannada-news-deva-guli/
https://newsnotout.com/2024/10/mangaluru-passport-issue-bangla-man-arrested-link-with-udupi/
https://newsnotout.com/2024/10/durga-pooje-navaratri-kannada-news-ladies-misbehaviour/
https://newsnotout.com/2024/10/bigboss-kannada-news-police-case-on-organiser-kannada-news/
See also  ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಹಲ್ಲೆ..! ಗ್ರಾಮಸ್ಥರನ್ನು ಮತಾಂತರಕ್ಕೆ ಮನವೊಲಿಸಲು ಹೋಗುತ್ತಿದ್ದರು ಎಂದು ಆರೋಪ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget