ಕರಾವಳಿಕ್ರೈಂ

ಮಸೂದ್ ಹತ್ಯೆ ಪ್ರಕರಣದ ನಾಲ್ಕನೇ ಆರೋಪಿ ಜಾಮೀನು ಮೇಲೆ ಬಿಡುಗಡೆ, ಹೈಕೋರ್ಟ್ ಆದೇಶ

ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಕಳಂಜದಲ್ಲಿ ಕಳೆದ ವರ್ಷ ಸಂಭವಿಸಿದ್ದ ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿದ್ದ ನಾಲ್ಕನೇ ಆರೋಪಿ ಶಿವಪ್ರಸಾದ್ ಕಳಂಜ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ.

ಹೈಕೋರ್ಟ್ ಆದೇಶದ ಮೇಲೆ ಬಿಡುಗಡೆ ಮಾಡಲಾಗಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಪೀಠವು ಆದೇಶವನ್ನು ಹೊರಡಿಸಿದೆ. ಇತ್ತೀಚೆಗೆ ಪ್ರಕರಣದ 7ನೇ ಆರೋಪಿಯಾಗಿರುವ ಜಿಮ್‌ ರಂಜಿತ್ ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು ಆ.೪ ರಂದು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿತ್ತು.

2022 ಜು.19ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡ ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಗಂಭೀರ ಗಾಯಗೊಂಡ ಮಸೂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ‌ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

Related posts

ಇಸ್ರೇಲ್ ರಾಯಭಾರಿಯನ್ನು ಭೇಟಿಯಾದದ್ದೇಕೆ ನಟಿ ಕಂಗನಾ ರಣಾವತ್? ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟಿ ಹೇಳಿದ್ದೇನು?

ಮಂಗಳೂರು: ವಾಟ್ಸ್‌ ಆ್ಯಪ್ ಸಂದೇಶ ನಂಬಿ 1 ಕೋಟಿ ರೂ.ಗೂ ಅಧಿಕ ಹಣ ಹೂಡಿಕೆ ಮಾಡಿದ ವ್ಯಕ್ತಿ..! ಹಣ ಹಿಂಪಡೆಯಲಾಗದೆ ಪೊಲೀಸರಿಗೆ ದೂರು..!

ಉಡುಪಿ: ತರಕಾರಿ ಗಿಡಗಳ ಮಧ್ಯೆ ಕಳೆ ಕೀಳುವಾಗ ಕಚ್ಚಿದ ಹಾವು..! ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು..!