Latestದೇಶ-ವಿದೇಶ

ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಸ್ಫೋಟ, 10 ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವು..!

336

ನ್ಯೂಸ್‌ ನಾಟೌಟ್‌: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಇದೀಗ (ಜೂ.30) ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ಎಂಬಲ್ಲಿ ಸಂಭವಿಸಿದೆ.

ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಖಾನೆಯೊಳಗೆ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

See also  ಕುಂಭಮೇಳದಲ್ಲಿ ಹಿಂದೂಯೇತರರಿಗೆ ಅಂಗಡಿ ತೆರೆಯಲು ಅವಕಾಶ ಇಲ್ಲ ಎಂದ ಎಬಿಎಪಿ..! ಈ ಬಗ್ಗೆ ಟ್ರಸ್ಟ್ ಅಧ್ಯಕ್ಷ ನೀಡಿದ ಕಾರಣಗಳೇನು..?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget