ನ್ಯೂಸ್ ನಾಟೌಟ್: ಪಾಕಿಸ್ತಾನ ಉಗ್ರ ಪೋಷಕ ರಾಷ್ಟ್ರ ಎಂಬುದು ಮತ್ತೆ ಸಾಬೀತಾಗಿದೆ. ಪಾಕಿಸ್ತಾನ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಉಗ್ರ ಮಸೂದ್ ಅಜರ್ ನ14 ಮಂದಿ ಕುಟುಂಬ ಸದಸ್ಯರ ಹತ್ಯೆ ಹಿನ್ನೆಲೆ ಪಾಕಿಸ್ತಾನ ಸರ್ಕಾರ ಮಸೂರ್ ಅಜರ್ ಗೆ 14 ಕೋಟಿ ರೂ. ಪರಿಹಾರ ಘೋಷಿಸಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ ಪ್ರತೀಕಾರದ ದಾಳಿಯಲ್ಲಿ ನಿಷೇಧಿತ ಉಗ್ರ ಸಂಘಟನೆ ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ 10 ಮಂದಿ ಸೇರಿ 14 ಮಂದಿ ಹತ್ಯೆಯಾಗಿದ್ದಾರೆ.
ಪಾಕ್ ನ ಬಹಾವಲ್ಪುರದಲ್ಲಿ ಉಗ್ರ ಸಂಘಟನೆಯ ಪ್ರಧಾನ ಕಚೇರಿಯ ಮೇಲೆ ನಡೆಸಿದ ದಾಳಿಯಲ್ಲಿ ಮಸೂದ್ ಕುಟುಂಬದ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ಬಹಾವಲ್ಪುರದ ಸುಭಾನ್ ಅಲ್ಲಾ ಮಸೀದಿ ಮೇಲಿನ ದಾಳಿಯಲ್ಲಿ ಬಲಿಯಾದವರಲ್ಲಿ ಜೆಇಎಂ ಮುಖ್ಯಸ್ಥನ ಅಕ್ಕ ಮತ್ತು ಆಕೆಯ ಪತಿ, ಸೋದರಳಿಯ ಮತ್ತು ಅವರ ಪತ್ನಿ, ಮತ್ತೊಬ್ಬ ಸೊಸೆ ಮತ್ತು ಅವರ ಕುಟುಂಬದ 5 ಮಕ್ಕಳು ಸೇರಿದ್ದಾರೆ. ಇದರ ಜೊತೆಗೆ ಮಸೂದ್ ನ ಆಪ್ತ ಸಹಚರ, ಆತನ ತಾಯಿ ಸೇರಿ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಜರ್ ಹೇಳಿಕೆಯಲ್ಲಿ ತಿಳಿಸಿದ್ದಾನೆ.
ದಾಳಿಗೂ ಮುನ್ನ ಉಗ್ರರು ಮಾತ್ರವಲ್ಲ ಅವರ ಕುಟುಂಬವನ್ನು ನಾಶ ಮಾಡಬೇಕು. ಆಗ ಉಗ್ರರ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನ್ಯಾಯ ಸಿಗುತ್ತದೆ. ಅವರಿಗೂ ನೋವು ಏನು ಎನ್ನುವುದು ಗೊತ್ತಾಗಬೇಕೆಂಬ ಆಗ್ರಹ ಕೇಳಿ ಬಂದಿತ್ತು.
ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ, ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ