ನ್ಯೂಸ್ ನಾಟೌಟ್: ಮ್ಯಾನ್ಮಾರ್ ನಲ್ಲಿಂದು ಸಂಭವಿಸಿದ ಭೀಕರ ಭೂಕಂಪಕ್ಕೆ ಹಲವೆಡೆ ಗಗನಚುಂಬಿ ಕಟ್ಟಡಗಳು ನೆಲಸಮವಾಗಿದೆ. ಅಲ್ಲದೇ ಕನಿಷ್ಠ 43 ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಇಂದು(ಮಾ.28) ಬೆಳಗ್ಗೆ 11:50ರ ಸುಮಾರಿಗೆ 7.7 ತೀವ್ರಯ ಭೂಕಂಪ ಸಂಭವಿಸಿದೆ, ಮಧ್ಯಾಹ್ನ 12:50ರ ಸುಮಾರಿಗೆ 6.8 ತೀವ್ರತೆಯಲ್ಲಿ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ. ಇದರಿಂದ ಮಯನ್ಮಾರ್ ಗಡಿ ದೇಶವಾಗಿರುವ ಭಾರತದ ನವದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಸಾಗಯಿಂಗ್ ನಗರದ ವಾಯುವ್ಯಕ್ಕೆ ಭೂಮಿಯ 10 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ.
View this post on Instagram
ಮ್ಯಾನ್ಮಾರ್ ನಲ್ಲಿ ಭೂಕಂಪ ಸಂಭವಿಸಿದ ಎಫೆಕ್ಟ್ ಬ್ಯಾಂಕಾಕ್ ಗೂ ತಟ್ಟಿದೆ. ಬ್ಯಾಂಕಾಕ್ ಹಾಗೂ ಥೈಲ್ಯಾಂಡ್ ನಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ಕಟ್ಟಡಗಳು ಅಲುಗಾಡಿವೆ, ಕೆಲವಡೆ ಮುಗಿಲೆತ್ತರದ ಕಟ್ಟಗಳು ಧ್ವಂಸವಾದ ದೃಶ್ಯಗಳು ಸೆರೆಯಾಗಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಸಾಮಾಜಿಕ ಜಾಲತಾಣದಲ್ಲಿ ಭೂಕಂಪದ ತೀವ್ರತೆ ಬಗ್ಗೆ ಮಾಹಿತಿ ನೀಡಿದೆ.