Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಮಯನ್ಮಾರ್‌ ಭೂಕಂಪದಲ್ಲಿ ಸಾವಿನ ಸಂಖ್ಯೆ 694ಕ್ಕೆ ಏರಿಕೆ..! 15 ಟನ್‌ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದ ಭಾರತ

470
Spread the love

ನ್ಯೂಸ್‌ ನಾಟೌಟ್: ಮಯನ್ಮಾರ್‌ ನಲ್ಲಿ (Myanmar) ನಿನ್ನೆಯಿಂದ 6 ಬಾರಿ ಭೂಕಂಪ ಸಂಭವಿಸಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಕ್ಷಣದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694 ಕ್ಕೆ ಏರಿಕೆಯಾಗಿದ್ದು, 1,600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಅವಶೇಷಗಳ ಅಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.

ಮಯನ್ಮಾರ್‌ ನಲ್ಲಿ ಉಂಟಾದ ಭೀಕರ ಭೂಕಂಪ ಸಾಕಷ್ಟು ಸಾವು-ನೋವು ಉಂಟುಮಾಡಿದೆ. ಒಂದೆಡೆ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಇನ್ನೂ ನೂರಾರು ಮಂದಿ ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಾಗಿದೆ.

ಇದರಿಂದ ಮಯನ್ಮಾರ್‌ನ ನೈಪಿತಾವು ಸೇರಿ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಸಂತ್ರಸ್ತವಾಗಿರುವ ಮಯನ್ಮಾರ್‌ ಗೆ ಭಾರತ ನೆರವಿನ ಹಸ್ತ ಚಾಚಿದೆ. ತಾತ್ಕಾಲಿಕ ಟೆಂಟ್‌ ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ನೈರ್ಮಲ್ಯ ಕಿಟ್‌, ಸೋಲಾರ್‌ ಲೈಟ್‌, ಜನರೇಟರ್‌ ಸೆಟ್‌ ಹಾಗೂ ಔಷಧಗಳ ನೆರವನ್ನು ಭಾರತ ನೀಡಿದೆ. ಈಗಾಗಲೇ ಸುಮಾರು 15 ಟನ್‌ ಪರಿಹಾರ ಸಾಮಗ್ರಿಗಳನ್ನು ಭಾರತೀಯ ವಾಯುಸೇನೆಯ C-130-J ವಿಮಾನ ವಿಮಾನದಲ್ಲಿ ಮ್ಯಾನ್ಮಾರ್‌ ಗೆ ಕಳುಹಿಸಲಾಗುತ್ತಿದೆ.

See also  ಕೈಗೆ ಕೋಳ ಹಾಕಿಸಿಕೊಂಡಿದ್ದಾಗಲೇ ಪೊಲೀಸರೆದುರು ಸಿಗರೇಟ್ ಸೇದಿ ರೀಲ್ಸ್ ಮಾಡಿದ ರೌಡಿ..! ಪೊಲೀಸರ ಹೆದರಿಕೆ ಇಲ್ಲದ ಈತನ ಮೇಲಿರುವ ಕೇಸ್ ಗಳೆಷ್ಟು ಗೊತ್ತಾ..?
  Ad Widget   Ad Widget   Ad Widget   Ad Widget   Ad Widget   Ad Widget