ರಾಜ್ಯವೈರಲ್ ನ್ಯೂಸ್ಶಿಕ್ಷಣ

ಮುಂದಿನ‌ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್ ಇಲ್ಲ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ

157

ನ್ಯೂಸ್ ನಾಟೌಟ್: ಮುಂದಿನ‌ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್​ ಮಾರ್ಕ್ಸ್)​​ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಗ್ರೇಸ್ ಮಾರ್ಕ್ಸ್ ಕೊಡಬೇಡಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಗ್ರೇಸ್​ ಮಾರ್ಕ್ಸ್​​ ನೀಡುವುದಿಲ್ಲ ಎಂದರು.

ಈ ವರ್ಷ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ರಾಜ್ಯದ ಒಟ್ಟಾರೆ ಫಲಿತಾಂಶ ಶೇ73.40 ಆಗಿದೆ. ಕಳೆದ ವರ್ಷ ಶೇ83 ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ 2288 ಶಾಲೆಗಳು ಶೇ100 ರಷ್ಟು ಫಲಿತಾಂಶ ಪಡೆದಿವೆ ಎಂದು ಮಾಹಿತಿ ನೀಡಿದರು.
ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕತೆ ಹಾಗೂ ಶಿಕ್ಷಣ ಗುಣಮಟ್ಟ ಕುಸಿತಕ್ಕೆ ಕಾರಣವಾಗುವ ಕೃಪಾಂಕ ವ್ಯವಸ್ಥೆಯನ್ನು ಮುಂದುವರಿಸದಂತೆ ಸಿಎಂ ಸ್ಪಷ್ಟ ನಿರ್ದೇಶನ ನೀಡಿದ್ದರು.

ಶಾಲಾ ಶಿಕ್ಷಣ ಇಲಾಖೆ ಈ ವರ್ಷ 1.70 ಲಕ್ಷ 10ನೇ ತರಗತಿ ಮಕ್ಕಳಿಗೆ ಶೇ20 ರಷ್ಟು ಕೃಪಾಂಕ ನೀಡಿತ್ತು. ಆದರೂ ಕೂಡ ಕಳೆದ ವರ್ಷಕ್ಕಿಂತ ಈ ವರ್ಷ ಶೇ10 ರಷ್ಟು ಕುಸಿತವಾಗಿದೆ. ಈ ಕೃಪಾಂಕ ನೀಡಿದ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ಹಾಗಾಗಿ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ ಯಾವುದೇ ಕಾರಣಕ್ಕೂ ನೀಡಲಾಗುವುದಿಲ್ಲ ಎಂದಿದ್ದಾರೆ.

Click

https://newsnotout.com/2024/10/drone-in-karavaa-kannada-news-suspence-3-km-above-d/
https://newsnotout.com/2024/10/kannada-news-britain-govt-nagaland-origin-bidding/
https://newsnotout.com/2024/10/renukaswami-kannada-news-photo-issue-comment-on-whats-app/
https://newsnotout.com/2024/10/ayudha-pooja-ksrtc-kannada-news-100-rs-sanctioed-per-bus/
See also  ಮಂಗಳೂರು: ಮಹಿಳೆಯರ ರಕ್ಷಣೆಗೆ ಕಿರುಕತ್ತಿ ಕೊಡಬೇಕು, VHP ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿಕೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget