ಶಿಕ್ಷಣಸುಳ್ಯ

ಸುಳ್ಯ: ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ಐ ಆ್ಯಂಡ್ ಬಿಯಾಂಡ್: ಸಿಸ್ಟಮಿಕ್” ಕಾರ್ಯಾಗಾರ, ಗಣ್ಯರು ಭಾಗಿ

217

ನ್ಯೂಸ್‌ ನಾಟೌಟ್‌: ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನೇತ್ರವಿಜ್ಞಾನ ವಿಭಾಗ ಮತ್ತು ಕರ್ನಾಟಕ ಆಪ್ತಾಲ್ಮಿಕ್ ಸೊಸೈಟಿ ಆಶ್ರಯದಲ್ಲಿ “ಐ ಆ್ಯಂಡ್ ಬಿಯಾಂಡ್: ಸಿಸ್ಟಮಿಕ್” ಎಂಬ ಶೀರ್ಷಿಕೆಯಡಿಯಲ್ಲಿ “ನೇತ್ರವಿಜ್ಞಾನ ಸಮ್ಮೇಳನ ಮತ್ತು ಕಾರ್ಯಾಗಾರ”ವನ್ನು ಬುಧವಾರ (ಡಿ.‭20‬) ರಂದು ಆಯೋಜಿಸಲಾಗಿತ್ತು.

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ ಸುಳ್ಯ ಇದರ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಅಧ್ಯಕ್ಷತೆಯಲ್ಲಿ ಈ ಕಾರ್ಯಾಗಾರ ನಡೆಯಿತು. ಉತ್ಕೃಷ್ಟವಾದ ಕಲಿಕೆಯ ವಾತಾವರಣವನ್ನು ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಧ್ಯೇಯವಾಗಿತ್ತು ಎಂದು ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ತಿಳಿಸಿದರು.

ಕರ್ನಾಟಕ ಆಪ್ತಾಲ್ಮಿಕ್ ಸೊಸೈಟಿಯ ಅಧ್ಯಕ್ಷ ಡಾ. ಕೃಷ್ಣಪ್ರಸಾದ್‌ ಕುಡ್ಲು ಮುಖ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದಲ್ಲಿ ಎಒಎಲ್ಇ ಇದರ ಉಪಾಧ್ಯಕ್ಷೆ ಶೋಭಾ ಚಿದಾನಂದ, ಎಒಎಲ್ ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಮತ್ತು ಎಒಎಲ್ ಇ ಕಾರ್ಯದರ್ಶಿ ಡಾ. ಐಶ್ವರ್ಯ ಕೆ.ಸಿ ಹಾಗೂ ಡೀನ್ ಡಾ.ನೀಲಾಂಬಿಕೈ ನಟರಾಜನ್, ಸಂಘಟನಾ ಅಧ್ಯಕ್ಷ ಡಾ.ಸುಧಾಕರ್ ಎನ್.ಎ, ಡಾ.ಮಹೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

See also  ಸುಳ್ಯ: ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಉದ್ಘಾಟನೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget