ಕ್ರೈಂ

ಬಾಡಿಗೆ ಮನೆಯಲ್ಲೇ ಹೈಟೆಕ್‌ ಗಾಂಜಾ ಕೃಷಿ..! ಮೂವರು ವೈದ್ಯ ವಿದ್ಯಾರ್ಥಿಗಳ ಬಂಧನ, ಕೃತ್ಯ ಬೆಳಕಿಗೆ ಬಂದದ್ದು ಹೇಗೆ..?

202

ನ್ಯೂಸ್‌ ನಾಟೌಟ್‌: ಎಂಬಿಬಿಎಸ್‌ ಓದಿ ಮುಂದೆ ವೈದ್ಯರಾಗಿ ಜನರಿಗೆ ಉತ್ತಮ ಸೇವೆ ನೀಡಲಿ ಎಂದು ಪೋಷಕರು ಮೆಡಿಕಲ್‌ ಶಿಕ್ಷಣ ನೀಡಿದರೆ ಈ ವಿದ್ಯಾರ್ಥಿಗಳು ಮಾತ್ರ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿ ಇದೀಗ ಕಂಬಿ ಎಣಿಸುವಂತಾಗಿದೆ.

ಶಿವಮೊಗ್ಗದಲ್ಲಿ ಕೇರಳ ಮತ್ತು ತಮಿಳುನಾಡು ಮೂಲದ ಮೂವರು ಮೆಡಿಕಲ್ ವಿದ್ಯಾರ್ಥಿಗಳು ಮೆಡಿಕಲ್ ವ್ಯಾಸಂಗ ಪೂರ್ಣಗೊಳಿಸಿ, ಇಂಟರ್ನ್‌ಶಿಪ್ ಮಾಡುತ್ತಿದ್ದರು. ಇವರು ವಾಸವಿದ್ದ ಬಾಡಿಗೆ ಮನೆಯಲ್ಲಿ ಗಾಂಜಾ ಬೆಳೆದು ಅದನ್ನು ಮಾರಾಟ ಮಾಡುತ್ತಿದ್ದರು. ಈ ವಿಷಯ ತಿಳಿದ ಪೊಲೀಸರು ಕಾರ್ಯಾಚರಣೆ ನಡೆಸಿ ವಿಘ್ನರಾಜ್, ಪಾಂಡಿದೊರೈ, ವಿನೋದ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ.ಆರೋಪಿಗಳು ಹೈಟೆಕ್ ಕೃಷಿ ಮೂಲಕ ಬಾಡಿಗೆ ಮನೆಯಲ್ಲೇ ಗಾಂಜಾ ಬೆಳೆದು ಇತರ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 227 ಗ್ರಾಂ ಗಾಂಜಾ, 1.53 ಕೆಜಿ ಹಸಿ ಗಾಂಜಾ, 10 ಗ್ರಾಂ ಚರಸ್, ಗಾಂಜಾ ಬೀಜಗಳಿರುವ ಸಣ್ಣ ಬಾಟಲಿ, 3 ಕೆನಾಬಿಲ್ ಆಯಿಲ್ ಸಿರಿಂಜ್, ರೋಲಿಂಗ್ ಪೇಪರ್, 2 ಹುಕ್ಕಾ ಕೊಳವೆ, 4 ಹುಕ್ಕಾ ಕ್ಯಾಪ್, ಗಾಂಜಾ ಗಿಡದ ಕಾಂಡ, 19 ಸಾವಿರ ರೂ. ನಗದು ಹಾಗೂ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೂವರು ಮೆಡಿಕಲ್ ವಿದ್ಯಾರ್ಥಿಗಳು ಬಾಡಿಗೆ ಮನೆಯೊಳಗೆ ಹೈಟೆಕ್ ಟೆಂಟ್ ನಿರ್ಮಿಸಿ ಗಾಂಜಾ ಬೆಳೆಯುತ್ತಿದ್ದರು. ಬಳಿಕ ಗಾಂಜಾವನ್ನು ಪುಡಿ ಮಾಡಿ ಇತರ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸಣ್ಣ ಸುಳಿವು ಸಿಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ದಾಳಿ ನಡೆಸಿದ್ದಾರೆ. ಈ ವೇಳೆ ಮೆಡಿಕಲ್ ವಿದ್ಯಾರ್ಥಿಗಳ ಕೃತ್ಯ ಬೆಳಕಿಗೆ ಬಂದಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ವ್ಯವಹಾರ ವಿಚಾರವಾಗಿ ದಂಪತಿ ನಡುವೆ ಕಲಹ..! ಉದ್ಯಮಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget