ಕ್ರೈಂ

ಮೇಲುಕೋಟೆ ವಿವಾಹಿತ ಶಿಕ್ಷಕಿಯ ಉಸಿರು ನಿಲ್ಲಿಸಿದ ಪ್ರಕರಣ – ಆರೋಪಿ ಅರೆಸ್ಟ್!!

249

ನ್ಯೂಸ್‌ ನಾಟೌಟ್‌ :ಮಂಡ್ಯ ಜಿಲ್ಲೆಯ ಮೇಲುಕೋಟೆ (Melukote) ಶಿಕ್ಷಕಿ (Teacher) ದೀಪಿಕಾ ನಾಪತ್ತೆ ಹಾಗೂ ದುರಂತ ಅಂತ್ಯ ಬೆಳಕಿಗೆ ಬಂದ 30 ಗಂಟೆಯಲ್ಲೇ ಪೊಲೀಸರು ಹಂತಕನನ್ನು ಬಂಧಿಸಿದ್ದಾರೆ.ತಲೆಮರೆಸಿಕೊಂಡಿದ್ದ ಆರೋಪಿ ನಿತೀಶ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾಳನ್ನು (28) ಅದೇ ಗ್ರಾಮದ ನಿತೀಶ್ ಉಸಿರು ನಿಲ್ಲಿಸಿ ಹೂತು ಹಾಕಿದ್ದ. ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದು, ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ ಸ್ಕೂಟರ್ ಪತ್ತೆಯಾಗಿತ್ತು. ಅಲ್ಲದೆ ದೀಪಿಕಾಳನ್ನು ಎಳೆದಾಡುತ್ತಿದ್ದ ದೃಶ್ಯವನ್ನು ಬೆಟ್ಟದ ಮೇಲಿನಿಂದ ಪ್ರವಾಸಿಗರೊಬ್ಬರು ವೀಡಿಯೋ ಮಾಡಿದ್ದರು. ಇದಾದ ನಂತರ ಮೇಲುಕೋಟೆ ಠಾಣೆಗೆ ದೀಪಿಕಾ ಪೋಷಕರು ನಾಪತ್ತೆ ದೂರು ನೀಡಿದ್ದರು. ಸೋಮವಾರ ಸಂಜೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು. 

ಪತ್ತೆಯಾಗುತ್ತಿದ್ದಂತೆ ನಿತೀಶ್ ಗ್ರಾಮದಿಂದ ಎಸ್ಕೇಪ್ ಆಗಿದ್ದ. ಅಲ್ಲದೇ ದೀಪಿಕಾಗೆ ಕೊನೆಯದಾಗಿ ಈತನೇ ಫೋನ್ ಕಾಲ್ ಮಾಡಿದ್ದ. ನಿತೀಶ್ ಈ ಕೃತ್ಯವೆಸಗಿದ್ದಾನೆ ಎಂದು ದೀಪಿಕಾ ಪತಿ ಲೋಕೇಶ್ ಆರೋಪ ಮಾಡಿದ್ದರು. ಈ ಅನುಮಾನದಿಂದ ನಾಪತ್ತೆಯಾಗಿದ್ದ ನಿತೀಶ್‌ನನ್ನು ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ನಿತೀಶ್‌ನನ್ನು ಬಂಧಿಸಿ ಪೊಲೀಸರು ಕರೆತಂದಿದ್ದಾರೆ. ಇಂದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. 

See also  ಮನೆಯೊಳಗೆ ತಾಯಿ-ಮಕ್ಕಳ ನಿಗೂಢ ಸಾವು..! ಆಕೆಯ ಪತಿ ಬಿಚ್ಚಿಟ್ಟ ರಹಸ್ಯವೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget