ಕ್ರೈಂ

ಯುವಕನ ಮೇಲೆಯೇ ಅತ್ಯಾಚಾರ: ಚಿಕ್ಕೋಡಿಯಲ್ಲಿ ವಿಲಕ್ಷಣ ಘಟನೆ

26

ಚಿಕ್ಕೋಡಿ: ಯುವಕನೊಬ್ಬ ಮತ್ತೊಬ್ಬ ಯುವಕನ ಮೇಲೆ ರೇಪ್ ಮಾಡಿದ ವಿಲಕ್ಷಣ ಘಟನೆ ಚಿಕ್ಕೋಡಿ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಬಸ್‌ಗಾಗಿ ಕಾಯುತ್ತಿದ್ದ ಯುವಕನಿಗೆ ಡ್ರಾಪ್ ಕೊಡುವ ನೆಪದಲ್ಲಿ ದ್ವಿ ಚಕ್ರ ವಾಹನಕ್ಕೆ ಹತ್ತಿಸಿಕೊಂಡ ಕಾಮುಕ ಮಾರ್ಗ ಮಧ್ಯೆ ನಿರ್ಜನ ಪ್ರದೇಶದಲ್ಲಿ ಬಲವಂತವಾಗಿ ಅನೈಸರ್ಗಿಕ ಸಂಭೋಗ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ನೊಂದ ಯುವಕ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅತ್ಯಾಚಾರಿ ಆರೋಪಿ ರಾಜು ನೀಲವ್ವ ಆಚಾರಟ್ಟಿ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ.