Latestಕ್ರೈಂದೇಶ-ವಿದೇಶರಾಜ್ಯ

ಬೆಳ್ಳಂಬೆಳಿಗ್ಗೆ ಅಕ್ರಮ ಮೈಕ್ರೋ ಫೈನಾನ್ಸ್ ದಂಧೆಕೋರರ ಮನೆಗಳ ಮೇಲೆ ಪೊಲೀಸ್ ದಾಳಿ..! ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ಆರೋಪ..!

731

ನ್ಯೂಸ್ ನಾಟೌಟ್: ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ಕಳೆದ ಕೆಲವು ವಾರಗಳಿಂದ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಜೊತೆಗೆ ಬಡ್ಡಿ, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ಕೂಡ ಹೆಚ್ಚಾಗಿದೆ ಎಂದು ದೂರುಗಳು ಬಂದಿತ್ತು. ಹೀಗಾಗಿ ಎಸ್ಪಿ ಲಕ್ಷ್ಮಣ ನಿಂಬರಗಿ ಆದೇಶದ ಮೇರೆಗೆ ಬೆಳ್ಳಂಬೆಳಿಗ್ಗೆ ಮನೆಗಳ ಮೇಲೆ ದಾಳಿ ನಡೆಸಿ, ಶಾಕ್ ನೀಡಿದ್ದಾರೆ.

ಇದನ್ನೂ ಓದಿ: ಸಾಲು ಸಾಲಾಗಿ ಬೈಕ್‌ ಗಳಲ್ಲಿ ಲಾಂಗ್ ಹಿಡಿದು ಸವಾರಿ..! ಮಧ್ಯರಾತ್ರಿ ಮಾರಕಾಸ್ತ್ರಗಳ ಜೊತೆ ಬೈಕ್ ವ್ಹೀಲಿಂಗ್..!

ಜಿಲ್ಲೆಯ ಹಲವೆಡೆ ಪೋಲಿಸರು ದಾಳಿ ನಡೆಸಿದ್ದು, ದಾಳಿ ಮಾಡಿ ಅಕ್ರಮ ಹಣ, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ಮೈಕ್ರೋಫೈನಾನ್ಸ್ ಹಾಗೂ ಅಕ್ರಮ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬಡ ಜನರು ಬೇಸತ್ತು ಹೋಗಿದ್ದು, ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

See also  ಮಂಗಳೂರು: ಸ್ನೇಹಮಯಿ ಕೃಷ್ಣ ವಿರುದ್ಧದ ವಾಮಾಚಾರ ಪ್ರಕರಣಕ್ಕೆ ಟ್ವಿಸ್ಟ್..! ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget