Latestಉಡುಪಿಕೊಡಗುದಕ್ಷಿಣ ಕನ್ನಡರಾಜ್ಯವೈರಲ್ ನ್ಯೂಸ್

ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ, ಶಾಲಾ ಶಿಕ್ಷಣ ಇಲಾಖೆ ಆದೇಶ

917

ನ್ಯೂಸ್ ನಾಟೌಟ್: ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸರ್ಕಾರ ಘೋಷಣೆ ಮಾಡಿತ್ತು. ಅದರಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದೆ.

ಮುಖ್ಯ ಅಡುಗೆಯವರಿಗೆ ಮಾಸಿಕ ಗೌರವಧನವನ್ನು 3,700 ರಿಂದ 4,700 ರೂ.ಗೆ ಹೆಚ್ಚಿಸಲಾಗಿದೆ. ಅಂತೆಯೇ ಅಡುಗೆ ಸಹಾಯಕರಿಗೆ 3,600 ರೂ.ನಿಂದ 4,600 ರೂ.ಗೆ ಹೆಚ್ಚಳ ಮಾಡಲಾಗಿದೆ.
ರಾಜ್ಯದ ಎಲ್ಲಾ 31 ಜಿಲ್ಲಾ ಪಂಚಾಯಿತಿಗಳ ಸಿಇಒಗಳು ಹಾಗೂ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರದ ಆದೇಶದಲ್ಲಿ ಸೂಚಿಸಲಾದ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಲಾಗಿದೆ.

ಗೌರವ ಸಂಭಾವನೆಯನ್ನು ನೇರ ನಗದು ವರ್ಗಾವಣೆ ವೇದಿಕೆ ಮೂಲಕವೇ ಪಾವತಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ.

ಬಿಗ್‌ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಆರೋಪ..! 14 ಲಕ್ಷ ರೂಪಾಯಿಗೆ ಒಪ್ಪಂದ..!

See also  ರಾಜ್ಯದ ಪ್ರಖ್ಯಾತ ಪ್ರವಾಸಿ ನಗರದಲ್ಲಿ ಗಡಗಡ ನಡುಗಿದ ಭೂಮಿ..! ಮತ್ತೊಮ್ಮೆ ಭೂಕಂಪದ ಆತಂಕದಲ್ಲಿ ಜನತೆ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget