ಕ್ರೈಂದೇಶ-ವಿದೇಶ

ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ..! ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆ..!

ನ್ಯೂಸ್ ನಾಟೌಟ್ : ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿದ 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಅರಕಲಗೂಡು ತಾಲೂಕಿನ ರಾಗಿಮರೂರು ಗ್ರಾಮದ ಶಾಲೆಯಲ್ಲಿ ನಡೆದಿದೆ.

ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಅರಕಲಗೂಡು ಹಾಗೂ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕ್ಷೇತ್ರಾಧಿಕಾರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಗುರುವಾರ(ಸೆ.26) ಶಾಲೆಯಲ್ಲಿ ವಿದ್ಯಾರ್ಥಿಗಳು ಬಿಸಿಯೂಟ ಸೇವಿಸುತ್ತಿದ್ದ ವೇಳೆ ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಪರಿಣಾಮ ಬಿಸಿಯೂಟ ಸೇವಿಸಿದ್ದ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

Related posts

ಸುಳ್ಯ: ಮಲಗಿದ್ದ ಅಪರಿಚಿತ ವ್ಯಕ್ತಿಯ ಮೇಲೆ ಹತ್ತಿದ ವಾಹನ, ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಫೈನಲ್ ತಲುಪಿ ಅನರ್ಹಗೊಂಡ ವಿನೇಶ್‌ ಆಸ್ಪತ್ರೆಗೆ ದಾಖಲು..! ಕೇವಲ 50ಗ್ರಾಂ ಅಧಿಕ ತೂಕ ಮುಳುವಾಯಿತೇ..?

ಬಸ್ ನಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೋಲಿಸ್ ಗಿರಿ: ನಾಲ್ವರನ್ನು ಬಂಧಿಸಿದ ಪೊಲೀಸರು