ನ್ಯೂಸ್ ನಾಟೌಟ್: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ 5 ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ನೂತನ ಬೆಂಗಳೂರು ನಗರ ಪೊಲೀಸ್ ಕಮಿಷನರ್ ರನ್ನು ನೇಮಕ ಮಾಡಿದೆ.
ಕಳೆದ ಮೇ.6 ತಡರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಕಾಲ್ತುಳಿತ ಘಟನೆಗೆ ರಾಜ್ಯದ ಪೊಲೀಸ್ ಇಲಾಖೆ ಬೆಂಗಳೂರಿನ 39ನೇ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ತಡರಾತ್ರಿ 12.15ಕ್ಕೆ ಸಹಿ ಮಾಡುವ ಮೂಲಕ ಅಧಿಕಾರ ಸ್ವೀಕರಿಸಿದರು. ನೂತನ ಕಮಿಷನರ್ ಸೀಮಂತ್ ಕುಮಾರ್ ಅವರನ್ನು ಹಿರಿಯ ಅಧಿಕಾರಿಗಳು, ಡಿಸಿಪಿಗಳು ಸ್ವಾಗತಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ನಗರದ ಅಧಿಕಾರಿಗಳ ಜೊತೆ ಕಮಿಷನರ್ ಕಿರು ಸಭೆ ನಡೆಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತಾಡಿದ ನೂತನ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ , ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಆದೇಶದ ಮೇಲೆ ಅಧಿಕಾರ ಸ್ವೀಕರಿಸಿದ್ದೇನೆ. ಇಂಥಹ ಕಠಿಣ ಪರಿಸ್ಥಿತಿಯಲ್ಲೂ ಕೂಡ ಅಧಿಕಾರ ಸ್ವೀಕರಿಸಿದ್ದು, ಹಿಂದಿನ ಕಮಿಷನರ್ ಉತ್ತಮ ಕೆಲಸ ಮಾಡಿದ್ದಾರೆ. ಅದನ್ನ ಮುಂದುವರೆಸಿಕೊಂಡು ಹೋಗುತ್ತೇನೆ ಎಂದರು.
1996 year IPS officer Seemanth Kumar Singh is the new Bangalore City Police Commissioner. The present police commissioner B Dayanand has been suspended.@NewIndianXpress pic.twitter.com/euXEtBCHcZ
— Ashwini M Sripad/ಅಶ್ವಿನಿ ಎಂ ಶ್ರೀಪಾದ್🇮🇳 (@AshwiniMS_TNIE) June 5, 2025
ನಾನು ಕೂಡ ಹಿಂದೆ ಇದೇ ಕಚೇರಿಯಲ್ಲಿ ಕೆಲಸ ಮಾಡಿದ್ದೆ. ಈಗ ಸಮಯ ಬೇರೆಯೇ ರೀತಿಯೇ ಇದೆ. ಕಾಲ್ತುಳಿತ ಪ್ರಕರಣದ ಬಗ್ಗೆ ಈಗಲೇ ನಾನು ಏನು ಪ್ರತಿಕ್ರಿಯೆ ನೀಡಲ್ಲ. ಅಧಿಕಾರಿಗಳೊಂದಿಗೆ ಸಭೆ ಮಾಡಿ ಅನಂತರ ಪ್ರತಿಕ್ರಿಯಿಸುತ್ತೇನೆ ಎಂದು ನೂತನ ಪೊಲೀಸ್ ಆಯುಕ್ತರು ಹೇಳಿದ್ದಾರೆ.
3 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಅಪಹರಿಸಲು ಯತ್ನಿಸಿದವನ ಮೇಲೆ ಗುಂಡಿನ ದಾಳಿ..! ಆರೋಪಿ ಎನ್ ಕೌಂಟರ್ ಗೆ ಬಲಿ..!
ಆರ್ ಸಿಬಿ ವಿಜಯೋತ್ಸವದ ಅನಾಹುತಕ್ಕೆ 5 ಪೊಲೀಸರ ತಲೆದಂಡ..! ಅಧಿಕಾರಿಗಳ ಅಮಾನತ್ತಿಗೆ ಸರ್ಕಾರ ಕೊಟ್ಟ ಕಾರಣವೇನು..?