ಕರಾವಳಿಪುತ್ತೂರು

ಕಡಬ ತಾಲೂಕು ಆಡಳಿತ ಸೌಧ ಲೋಕಾರ್ಪಣೆ

343

ನ್ಯೂಸ್‌ನಾಟೌಟ್‌: ಕಡಬದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತಾಲೂಕು ಆಡಳಿತ ಸೌಧವನ್ನು ಬಂದರು, ಒಳನಾಡು ಜಲಸಾರಿಗೆ ಹಾಗೂ ಮೀನುಗಾರಿಕಾ ಸಚಿವ ಎಸ್‌. ಅಂಗಾರ ಅವರು ಶುಕ್ರವಾರ ನೆರವೇರಿಸಿದರು.

ಬಳಿಕ 4.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಡಬ ತಾಲೂಕು ಪಂಚಾಯತ್ ಕಟ್ಟಡ ಹಾಗೂ ಕಡಬ ತಾಲೂಕಿನ ಹಿರಿಮೆಗೆ ಗರಿಯಾದ 136 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕೊಯಿಲ ಪಶು ವೈದ್ಯಕೀಯ ಮಹಾವಿದ್ಯಾಲಯದ ಮೊದಲನೇ ಹಂತದ ಕಟ್ಟಡವನ್ನು ವೀಡಿಯೋಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿದರು. ಬಳಿಕ ಕಡಬ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿದರು.

ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್‌, ಪಶುವೈದ್ಯಕೀಯ ಕಾಲೇಜಿನ ಕಾರ್ಯಪಾಲಕ ಅಭಿಯಂತರರಾದ ದಾಮೋದರ್, ಬೀದ‌ರ್ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಕೆ.ಸಿ. ವೀರಣ್ಣ, ಬೀದ‌ರ್‌ ಪಶು ವೈದ್ಯಕೀಯ ಕಾಲೇಜಿನ ಡೀನ್ ಡಾ. ರಂಗನಾಥ್‌, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ದ.ಕ.ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವಿಜಯ್ ಕುಮಾರ್, ದ.ಕ. ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ. ಅರುಣ್ ಕುಮಾರ್ ಶೆಟ್ಟಿ, ಎನ್., ಎಚ್, ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಭರತ್ ಬಿ.ಎಂ, ಸುಳ್ಯ ತಹಶೀಲ್ದಾರರಾದ ಮಂಜುನಾಥ್‌, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರ ಮೂಲ್ಯ, ಕಡಬ ಉಪ ತಹಶೀಲ್ದಾರ್ ಮನೋಹರ್ ಮೊದಲಾದವರಿದ್ದರು.

See also  ರಾತ್ರಿ ಹಿಂದೂಗಳ ಮನೆಗೆ ನುಗ್ಗಿ ಮುಸ್ಲಿಂ ಯುವಕರ ದಾಂಧಲೆ..! ಗ್ರಾಮಸ್ಥರಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget