ನ್ಯೂಸ್ ನಾಟೌಟ್: ದೇಶದ ನಂಬರ್ ವನ್ ದೇವಸ್ಥಾನಗಳಲ್ಲಿ ಒಂದಾಗಿರುವ ಶ್ರೀ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಇಂಜಾಡಿಯವರು ಬಿಡುವಿಲ್ಲದ ಕೆಲಸದಲ್ಲಿ ನಿರತರಾಗಿದ್ದಾರೆ.
ಉತ್ಸಾಹದ ಚಿಲುಮೆಯಾಗಿರುವ ಅವರು ಜೂ.24ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರನ್ನು ಭೇಟಿ ಮಾಡಿದರು.
ದೇವಸ್ಥಾನದ ಅಭಿವೃದ್ಧಿಯ ಕುರಿತು ಮಾತುಕತೆ ನಡೆಸಿದರು. ಇದೇ ವೇಳೆ ಸಚಿವರನ್ನು ಕುಕ್ಕೆ ಸುಬ್ರಹ್ಮಣ್ಯಕ್ಕೆ ಜೂ.30ರಂದು ಆಗಮಿಸಬೇಕೆಂದು ಆಮಂತ್ರಿಸಲಾಯಿತು. ರಾಮಲಿಂಗಾ ರೆಡ್ಡಿಯವರು ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನಕ್ಕೆ ಆಗಮಿಸಿದ್ದರು.