ಕೊಡಗುರಾಜ್ಯ

ಕರ್ನಾಟಕದಲ್ಲಿ 1,351ಕ್ಕೂ ಹೆಚ್ಚು ಸ್ಥಳಗಳಲ್ಲಿ ಭೂಕುಸಿತದ ಮುನ್ಸೂಚನೆ..! ಭೂವೈಜ್ಞಾನಿಕ ಸಮೀಕ್ಷೆಯಿಂದ ಬಯಲಾಯ್ತು ಭಯಾನಕ ಮಾಹಿತಿ..!

ನ್ಯೂಸ್ ನಾಟೌಟ್ : ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ 1,351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂಬ ಭಯಾನಕ ಮಾಹಿತಿ ಬಹಿರಂಗವಾಗಿದೆ. ಈ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್​​​ನಲ್ಲಿ ಮಂಗಳವಾರ(ಜು.23) ಮಾಹಿತಿ ನೀಡಿದ್ದಾರೆ.

ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಪದೇ ಪದೆ ಸಂಭವಿಸುತ್ತಿರುವ ಭೂಕುಸಿತ ಘಟನೆಗಳ ಕುರಿತು ಬಿಜೆಪಿ ಎಂಎಲ್‌ಸಿಗಳಾದ ಸಿಟಿ ರವಿ, ಎನ್ ರವಿಕುಮಾರ್, ಛಲವಾದಿ ಟಿ. ನಾರಾಯಣಸ್ವಾಮಿ ಅವರು ಮಂಡಿಸಿದ ಪ್ರಸ್ತಾವನೆಗೆ ಉತ್ತರಿಸಿದ ಸಚಿವರು, ‘ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭೂಕುಸಿತದ ಅಪಾಯ ಎದುರಿಸುತ್ತಿರುವ ಹೆಚ್ಚಿನ ಸ್ಥಳಗಳಿಗೆ ಶೀಘ್ರದಲ್ಲಿಯೇ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಿದ್ದೇವೆ ಎಂದರು.

ತೀವ್ರವಾದ ಅಲ್ಪ ಮಳೆ, ಮೇಘ ಸ್ಫೋಟಗಳು, ನೈಸರ್ಗಿಕ ಇಳಿಜಾರುಗಳೊಂದಿಗೆ ಮಧ್ಯಪ್ರವೇಶಿಸುವುದು ಮತ್ತು ರಸ್ತೆ ನಿರ್ಮಾಣಗಳಂತಹ ಅಭಿವೃದ್ಧಿ ಕಾರ್ಯಗಳಿಗಾಗಿ ನದಿಗಳು ಮತ್ತು ತೊರೆಗಳ ನೈಸರ್ಗಿಕ ಹರಿವನ್ನು ತಿರುಗಿಸುವುದು ಭೂಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸಿದ್ದಾರೆ.

ಕೆಲವು ವರ್ಷಗಳ ಹಿಂದೆ ಕೊಡಗು ಜಿಲ್ಲೆಯ ಮಡಿಕೇರಿ ಸಮೀಪ ಸಂಪಾಜೆ ಘಾಟಿ ವ್ಯಾಪ್ತಿಯಲ್ಲಿ ಮತ್ತು ಜಿಲ್ಲೆಯ ಇತರ ಕೆಲವು ಕಡೆಗಳಲ್ಲಿ ಭಾರಿ ಪ್ರಮಾಣದ ಭೂಕುಸಿತಗಳು ಸಂಭವಿಸಿದ್ದವು. ಈ ವರದಿ ಆತಂಕಕ್ಕೆ ಕಾರಣವಾಗಿದ್ದು, ಸೂಕ್ತ ಕ್ರಮಕೈಗೊಳ್ಳಲು ಒತ್ತಾಯಿಸಲಾಗಿದೆ.

Related posts

KSRTC: ಸರ್ಕಾರಿ ಸಾರಿಗೆ ಬಸ್ ಗಳ ದರ ಏರಿಕೆ..! ಡೀಸೆಲ್ – ಪೆಟ್ರೋಲ್, ಹಾಲು ಈಗ ಬಸ್ ದರವೂ ಹೆಚ್ಚಳಕ್ಕೆ ಸಿದ್ಧತೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ಜುಲೈ 18ರವರೆಗೆ ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿಗೆ, ಶಾಸಕ ಬಸನಗೌಡ‌ ದದ್ದಲ್ ಗೂ ಸುತ್ತಿಕೊಳ್ಳುತ್ತಾ ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ..?

ಪೆರಾಜೆ: ನದಿ ಕಿನಾರೆಯ ರಸ್ತೆ ಬಂದ್ ಮಾಡಿದ ಮುಸ್ಲಿಂ ಕುಟುಂಬ! ವಿಚಾರಿಸಲು ಬಂದ ಪೊಲೀಸರಿಂದ ಪ್ರಕರಣಕ್ಕೆ ಸಿಕ್ಕಿತು ರೋಚಕ ತಿರುವು!