ಕ್ರೈಂ

ಉಪ್ಪಿನಂಗಡಿ: ಹೆಣ್ಣು ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ..!

644

ಉಪ್ಪಿನಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೌಢ ಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತ್ತು.

ಆಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಗುರುವಾರ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದರು. ಈ ಬಗ್ಗೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ತನ್ನ ಮೇಲೆ ಹಿರೆಬಂಡಾಡಿ ಗ್ರಾಮದ ಮತ್ತಿಮಾರು ಮನೆ ನಿವಾಸಿ ಕೇಶವ (34) ಎಂಬಾತ ಅತ್ಯಾಚಾರವೆಸಗಿರುವುದನ್ನು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೇಶವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

See also  ಡಿಸಿಎಂ ಡಿಕೆಶಿ ಮನೆದೇವರ ದೇಗುಲದಲ್ಲಿ ಕಳ್ಳರ ಕೈಚಳಕ..! ಕೆಂಕೇರಮ್ಮ ದೇಗುಲದಲ್ಲಿ ಚಿನ್ನ, ಬೆಳ್ಳಿ ಕಳ್ಳತನ‌..!
  Ad Widget   Ad Widget   Ad Widget   Ad Widget   Ad Widget