ಕ್ರೈಂ

ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ನೇಣು ಬಿಗಿದು ಕೊಲೆ ಮಾಡಿದ ಪಾಪಿ

577

ಕೆ.ಆರ್.ಪೇಟೆ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಕೊಲೆ ನಡೆಸಿರುವ ಆತಂಕಕಾರಿ ಘಟನೆ ಬೂಕನಕೆರೆ ಗ್ರಾಮದಲ್ಲಿ ನಡೆದಿದೆ.

ಬಾಲಕಿಯ ನರೆ ಮನೆಯ ಪರಮೇಶ್(46) ಎಂಬಾತ ಪೈಶಾಚಿಕ ಕೃತ್ಯವನ್ನು ಎಸಗಿದಾತ. ಕಳೆದ ಐದಾರು ತಿಂಗಳಿನಿಂದ ನಿರಂತರ ಬಾಲಕಿಯನ್ನು ಈತ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿ ಎಂದು ತಿಳಿದು ಆಕೆಗೆ ನೇಣು ಹಾಕಿ ಕೊಲೆ ಮಾಡಿದ್ದಾನೆ. ಈ ಕುರಿತು ಬಾಲಕಿಯ ಪೋಷಕರು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಪರಮೇಶ್ ಬಾಲಕಿಯ ಪೋಷಕರು ಕೆಲಸಕ್ಕೆ ಹೋದ ಸಮಯವನ್ನು ನೋಡಿಕೊಂಡು ಮನೆಗೆ ಬಂದು ಬಾಲಕಿಯನ್ನು ಬೆದರಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಆಕೆ ಗರ್ಭಿಣಿ ಎಂದು ತಿಳಿದ ತಕ್ಷಣ ಆಕೆಗೆ ನೇಣು ಬಿಗಿದು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಪರಮೇಶ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

See also  ವಯನಾಡು ಗುಡ್ಡ ಕುಸಿತ: ಸಾವಿನ ಸಂಖ್ಯೆ 275ಕ್ಕೆ ಏರಿಕೆ, 240 ಮಂದಿ ನಾಪತ್ತೆ..! ಕನ್ನಡಿಗರ ರಕ್ಷಣೆಗೆ ವಯಾನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್
  Ad Widget   Ad Widget   Ad Widget   Ad Widget   Ad Widget