ಕರಾವಳಿ

ಕೋವಿಡ್ ನಿರ್ವಹಣೆ ಸಿಬ್ಬಂದಿಗೆ ವೇತನ ಪಾವತಿಸದಿದ್ದರೆ ಕಠಿಣ ಕ್ರಮ : ಸಚಿವ ಅಂಗಾರ ಖಡಕ್ ಸೂಚನೆ

1.4k

ಮಂಗಳೂರು: ಸಮಯಕ್ಕೆ ಸರಿಯಾಗಿ ಕೋವಿಡ್ ನಿರ್ವಹಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನವನ್ನು ನೀಡಬೇಕು,ಒಂದು ವೇಳೆ ತಡವಾಗಿ ವೇತನ ನೀಡಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

 ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣೆ ಹಾಗೂ ಕೋವಿಡ್ ನಿಯಂತ್ರಣ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿದ್ದು, ಅದರ ನಿರ್ವಹಣೆ, ನಿಯಂತ್ರಣ ಹಾಗೂ ಶುಶ್ರೂಷೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಕಾಲಕಾಲಕ್ಕೆ ವೇತನ ಪಾವತಿಸುವುದು ಸಂಬಂಧಿಸಿದ ಅಧಿಕಾರಿಗಳ ಕರ್ತವ್ಯ. ಈ ಹಿನ್ನೆಲೆಯಲ್ಲಿ ಪ್ರಯೋಗಾಲಯ ತಂತ್ರಜ್ಞರು, ಸ್ಟಾಫ್ ನರ್ಸ್ ಗಳು ಹಾಗೂ ಊಟ ಉಪಾಹಾರ ಒದಗಿಸುವ ಕ್ಯಾಂಟೀನ್ ಗಳಿಗೆ ಕಾಲಕಾಲಕ್ಕೆ ವೇತನ ಪಾವತಿಸಬೇಕು. ಇದರಲ್ಲಿ ವಿಳಂಬ ತೋರುವ ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಅಥವಾ ಅವರನ್ನು ಅಮಾನತು ಮಾಡಬೇಕು ಸಚಿವರು ಸೂಚಿಸಿದರು.

See also  ಸ್ಥಳಾಂತರಗೊಂಡಿದೆ: ಗ್ರಾಹಕರ ಗಮನಕ್ಕೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget