Latestಕ್ರೈಂರಾಜ್ಯವೈರಲ್ ನ್ಯೂಸ್

ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಒಂದು ವರ್ಷದಿಂದ ನಿರಂತರ ಅತ್ಯಾಚಾರ..! ಮಗಳು ನೀಡಿದ ದೂರಿನಲ್ಲೇನಿದೆ..?

1.2k

ನ್ಯೂಸ್ ನಾಟೌಟ್: ತಂದೆಯೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಗದಗ ಜಿಲ್ಲೆಯಲ್ಲಿ ವರದಿಯಾಗಿದೆ.

16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸುಮಾರು 55 ವರ್ಷದ ತಂದೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಘಟನೆ ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ತಂದೆ ರಮೇಶ್ ಮೇಲೆ ಈಗ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಗರ್ಭಿಣಿ ಆಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಒಂದು ವರ್ಷದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ ನಡೆಸುತ್ತಿದ್ದ ಎನ್ನಲಾಗಿದೆ. ಅಕಸ್ಮಾತ್ ಯಾರ ಮುಂದಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂಬ ಆರೋಪ ಸಂತ್ರಸ್ತೆ ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.

ಸದ್ಯ ಆರೋಪಿ ತಂದೆ ರಮೇಶ್‌ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಡಿಎನ್‌ ಎ ಪರೀಕ್ಷೆ ಒಳಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ. ಈ ಕುರಿತು ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಬ್ಯಾಂಕ್ ಗಳ ರೆಪೋ ದರ ಶೇ.6ಕ್ಕೆ ಇಳಿಕೆ..! ಆರ್ ​​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಮಾಹಿತಿ

ಇನ್‌ ಸ್ಟಾಗ್ರಾಮ್ ನಲ್ಲಿ ಲವ್ ಆದವನ ಜೊತೆ ಎರಡನೇ ಮದುವೆಯಾದ ಮಹಿಳೆ.! ಮದುವೆಯ ವಿಡಿಯೋ ನೋಡಿ ಪತಿಗೆ ಶಾಕ್..!

ರೈಲ್ವೆ ಹಳಿ ಮೇಲೆ ಮಲಗಿ ರೀಲ್ಸ್ ಮಾಡಲು ಹೋದವ ಬದುಕಿದ್ದೇ ಪವಾಡ..! ಯುವಕ ಅರೆಸ್ಟ್, ಇಲ್ಲಿದೆ ವಿಡಿಯೋ

See also  ಧರ್ಮಸ್ಥಳ: ಹರಿದ ರವಿಕೆ, ಕಾರ್ಡ್ ಕೊಡುವುದೇ ಟ್ವಿಸ್ಟ್..? ತನಿಖೆಯಲ್ಲಿ ಮುಂದುವರಿಯುತ್ತಾರಾ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ..? ಏನೆಲ್ಲ ಬೆಳವಣಿಗೆ ನಡೆದಿದೆ ಪಿನ್ ಟು ಪಿನ್ ಡಿಟೇಲ್ಸ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget