ಕ್ರೈಂಬೆಂಗಳೂರು

ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್‌ ಸುರಿದು ಬೆಂಕಿಯಿಟ್ಟ ದುಷ್ಕರ್ಮಿಗಳು! ದುರುಳರ ಈ ಕೃತ್ಯಕ್ಕೆ ಕಾರಣವೇನು ಗೊತ್ತಾ..?

193

ನ್ಯೂಸ್‌ ನಾಟೌಟ್‌: ಸಂಬಂಧಿಕರ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ಆರ್​ಆರ್‌ ನಗರ(RR Nagar)ದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರ ಮನು ಎಂದು ಗುರುತಿಸಲಾಗಿದೆ.

ಈತ ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿಸುತ್ತಿದ್ದ. ಇವರಿಬ್ಬರ ಪ್ರೀತಿ-ಪ್ರೇಮದ ಸಂಬಂಧಕ್ಕೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಜುಲೈ 3 ರಂದು ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ ಯುವತಿಯ‌ನ್ನು‌ ಮನೆಗೆ ಕರೆದೊಯ್ದಿದ್ದ. ಈ ವೇಳೆ ಯುವತಿಯ ಪೋಷಕರು ಮನು ಮನೆಗೆ ನುಗ್ಗಿ ಹಲ್ಲೆ ನಡೆಸಿ ಯುವತಿಯನ್ನು ಕರೆದೊಯ್ದುದಿದ್ದರು.

ಇದಾದ ಬಳಿಕ ಮನು ಎಂದಿನಂತೆ ಕಾಲೇಜಿಗೆ ತೆರಳಿದ್ದು, ಆತನ ತಂದೆ ರಂಗನಾಥ ನಿನ್ನೆ (ಜು.15 ) ಬೆಳಗ್ಗೆ ಡ್ರಾಪ್ ಮಾಡಿದ್ದರು. ಬಳಿಕ ವಾಪಾಸ್ಸಾಗುವ ವೇಳೆ ಬಸ್ ನಿಲ್ದಾಣದಲ್ಲಿ‌ ಬಸ್​ಗೆ ಕಾಯುತ್ತಿದ್ದ ಮನುವನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಆತನ ಕೈ ಕಾಲು ಕಟ್ಟಿಹಾಕಿ ಬೆಂಕಿ ಹಚ್ಚಿದ್ದಾರೆ. ಗಾಯಾಳು ವಿದ್ಯಾರ್ಥಿ ಮನುಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

See also  ಕೊಯನಾಡು: ಬರೆಗೆ ಗುದ್ದಿ ಕಾರು ಪಲ್ಟಿ..! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
  Ad Widget   Ad Widget   Ad Widget   Ad Widget   Ad Widget   Ad Widget   Ad Widget