ಕರಾವಳಿ

ವ್ಯಾನಿಟಿ ಬ್ಯಾಗ್ ನಲ್ಲಿ ಬಟ್ಟೆಯೊಳಗೆ ಕಟ್ಟಿದ್ದ ಚಿನ್ನಾಭರಣ ಕಳವು, 4 ಲಕ್ಷ ಮೌಲ್ಯದ ಚಿನ್ನಾಭರಣದೊಂದಿಗೆ ಖತರ್ನಾಕ್ ಕಳ್ಳರು ಎಸ್ಕೇಪ್

430

ನ್ಯೂಸ್ ನಾಟೌಟ್ : ರೈಲು ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ ಘಟನೆ ಮಣಿಪಾದಲ್ಲಿ ನಡೆದಿದೆ. ಸುಮಾರು ೪ ಲಕ್ಷ ಮೌಲ್ಯದ ಚಿನ್ನಾಭರಣ ಎಂದು ತಿಳಿದು ಬಂದಿದೆ.

ಏನಿದು ಘಟನೆ?

ಪುನೀತ ವಸಂತ್ ಹೆಗ್ಡೆ ಎಂಬವರು ತಮ್ಮ ವ್ಯಾನಿಟಿ ಬ್ಯಾಗ್ ನಲ್ಲಿ ಬಂಗಾರದ ಒಡವೆಗಳನ್ನು ಒಂದು ಕವರ್ ನಲ್ಲಿ ಹಾಕಿ ಬಟ್ಟೆಗಳ ಮಧ್ಯೆ ಇಟ್ಟಿದ್ದು ಬ್ಯಾಗನ್ನು ಹೆಗಲಿನಲ್ಲಿ ಹಾಕಿಕೊಂಡಿದ್ದರು. ಇಂದ್ರಾಳಿ ರೈಲು ನಿಲ್ದಾಣದಿಂದ ರೈಲು ಹೊರಟಿದ್ದು ಸೀಟ್ ನಲ್ಲಿ ಕುಳಿತಾಗ ಪುನೀತ ಅವರ ವ್ಯಾನಿಟಿ ಬ್ಯಾಗ್ ಝಿಫ್ ತೆರೆದಿರುವುದು ಕಂಡು ಬಂದಿದೆ. ಬ್ಯಾಗ್ ಪರಿಶೀಲಿಸಿದಾಗ ಬ್ಯಾಗ್ ನ ಒಳಗೆ ಇಟ್ಟಿದ್ದ ಬಂಗಾರದ ಒಡೆವೆಗಳ ಕವರ್ ಕಾಣೆಯಾಗಿತ್ತು.ಇವರು ತಮ್ಮ ಕುಟುಂಬದೊಂದಿಗೆ ಮುಂಬಯಿಗೆ ಹೊರಡಲು ಸಿದ್ಧರಾಗಿದ್ದರು. ಮಾ.14 ರಂದು ಮಂಗಳೂರು – ಮುಂಬಯಿ ಎಕ್ಸ್ ಪ್ರೆಸ್ ರೈಲು ಏರಿದ್ದರು.

ಮಧ್ಯಾಹ್ನ 03:35 ಗಂಟೆಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಮಯ ಯಾರೋ ಕಳ್ಳರು ವ್ಯಾನಿಟಿ ಬ್ಯಾಗ್ ಝಿಫ್ ನ್ನು ತೆರೆದು ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ವ್ಯಾಚ್ ನ್ನು ಕಳವು ಮಾಡಿದ್ದಾರೆ ಎಂಬ ಮಾಹಿತಿ ಇವರಿಗೆ ಗೊತ್ತಾಗಿದೆ. ಕಳವಾದ ಚಿನ್ನಾಭರಣಗಳ ಅಂದಾಜು ತೂಕ 100 ಗ್ರಾಂ ಆಗಿದ್ದು, ಅಂದಾಜು ಮೌಲ್ಯ 4,00,000 ಆಗಿದೆ ಎಂದು ತಿಳಿದು ಬಂದಿದೆ. ಕಳವಾದ ವ್ಯಾಚ್ ನ ಅಂದಾಜು ಬೆಲೆ 3000 ಆಗಿದ್ದು, ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

See also  ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಗೆ ಅಕ್ಷಯ್‌ ಕೆ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget