ಕರಾವಳಿಕ್ರೈಂ

ವಿದ್ಯಾರ್ಥಿ ನಿಲಯದಿಂದ ಇಬ್ಬರು ವಿದ್ಯಾರ್ಥಿಗಳು ನಿಗೂಢ ನಾಪತ್ತೆ ಪ್ರಕರಣ..! ವಿಟ್ಲದ ಸರ್ಕಾರಿ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಪುತ್ತೂರಿನಲ್ಲಿ ಪತ್ತೆ!

273

ನ್ಯೂಸ್ ನಾಟೌಟ್: ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಬಗ್ಗೆ ಇಂದು(ಮಂಗಳವಾರ) ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ

ದೀಕ್ಷೀತ್(15) ಮತ್ತು ಗಗನ್(14) ನಾಪತ್ತೆಯಾಗಿರುವ ವಿದ್ಯಾರ್ಥಿಗಳು ಎನ್ನಲಾಗಿದೆ. ಇವರಿಬ್ಬರು ಆ.21ರಂದು ಬೆಳಗ್ಗೆ ಶಾಲೆಗೆಂದು ವಿದ್ಯಾರ್ಥಿ ನಿಲಯದಿಂದ ತೆರಳಿದವರು ಶಾಲೆಗೂ ಹೋಗದೇ ವಾಪಸ್ ವಿದ್ಯಾರ್ಥಿ ನಿಲಯಕ್ಕೂ ಬಾರದೆ ನಾಪತ್ತೆಯಾಗಿದ್ದರು ಎನ್ನಲಾಗಿದೆ.

ಸಂಜೆ ಈ ವಿಷಯ ಬೆಳಕಿಗೆ ಬಂದಿದೆ ಎಂದು ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಪ್ರಮೀಳಾ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಕಾಣೆಯಾದ ದೀಕ್ಷೀತ್ ಹಾಗೂ ಗಗನ್ ತಮ್ಮ ಮನೆಗೂ ತೆರಳಲಿಲ್ಲ ಎಂದು ತಿಳಿದುಬಂದಿದೆ. ಈಗ
ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ.

See also  ವೀರ ಸೇನಾನಿ ಸಾವರ್ಕರ್‌ ಪೋಸ್ಟರ್‌ ಹಾಕಿದ್ದಕ್ಕೆ ವ್ಯಕ್ತಿಯಿಂದ ಆಕ್ಷೇಪ
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget