ಕೊಡಗುಕ್ರೈಂ

ಕೊಡಗು: ನಾಪತ್ತೆಯಾಗಿ ನಾಲ್ಕು ದಿನಗಳ ಬಳಿಕ ಕಾಫಿತೋಟದಲ್ಲಿ ಪತ್ತೆಯಾಯ್ತು ಮಹಿಳೆಯ ಕಾಲು..!

278

ನ್ಯೂಸ್‌ನಾಟೌಟ್‌: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿರುವ ಕಾಫಿ ತೋಟವೊಂದರಲ್ಲಿ ಮಹಿಳೆಯೊಬ್ಬರ ಕಾಲು ಪತ್ತೆಯಾಗಿದೆ.! ಇದು ಸ್ಥಳೀಯರಲ್ಲಿ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಕಾಲು ಪತ್ತೆಯಾಗಿರುವ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿರುವ ಕಾಫಿ ತೋಟಕ್ಕೆ ಎಸ್​ಪಿ ಕೆ. ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇ 16ರಂದು ಚೋಂದು ಎಂಬ ಮಹಿಳೆ ನಾಪತ್ತೆಯಾಗಿದ್ದರು. ಇದೀಗ ನಾಲ್ಕು ದಿನಗಳ ಬಳಿಕ ಕಾಫಿ ತೋಟದಲ್ಲಿ ಮಹಿಳೆಯ ಕಾಲು ಹಾಗೂ ಬಟ್ಟೆ ಪತ್ತೆಯಾಗಿದೆ. ಈ ಬಗ್ಗೆ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆ ಚುರುಕುಗೊಳಿಸಿದ್ದಾರೆ.

ಕಾಡು ಪ್ರಾಣಿಗಳು ಮಹಿಳೆಯನ್ನು ತಿಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಮೃತ ಮಹಿಳೆಯ ಪತಿ ಅಪ್ಪಿ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಹಿಳೆ ಚೋಂದು ಹತ್ಯೆಯಾಗಿರುವ ಸಾಧ್ಯತೆ ಇದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

See also  ಅಂಗನವಾಡಿಯೊಳಗಿತ್ತು ನಾಗರ ಹಾವು, 24 ಮರಿ, 53 ಮೊಟ್ಟೆ ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget