ಕರಾವಳಿಪುತ್ತೂರುಶಿಕ್ಷಣ

ಅಳಕೆ ಮಜಲು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಆರಂಭಕ್ಕೆ ಕ್ರಮ, ಶಿಕ್ಷಣ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

217

ನ್ಯೂಸ್‌ ನಾಟೌಟ್‌ ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಗೊಳಪಟ್ಟ ಅಳಕೆಮಜಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಗತವರ್ಷದಲ್ಲಿ 6ನೇ ತರಗತಿ ಪ್ರಾರಂಭ ಮಾಡುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರನ್ನು ಬೆಂಗಳೂರಿನಲ್ಲಿ ಬುಧವಾರ (ಜೂ. 22 ರಂದು) ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಅಳಕೆಮಜಲು ಕಿರಿಯ ಪ್ರಾಥಮಿಕ ಶಾಲೆಯು 1ನೇ ತರಗತಿಯಿಂದ 5ನೇ ತರಗತಿಯವರೆಗೆ ನಡೆಯುತ್ತಿದ್ದು, ಒಟ್ಟು 133 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ 6ನೇ ತರಗತಿಯ ವಿದ್ಯಾಭ್ಯಾಸಕ್ಕಾಗಿ ಸುಮಾರು 3 ಕಿ.ಮೀ. ದೂರವಿರುವ ಮಿತ್ತೂರು, ಕಬಕ, ಓಜಾಲ ಶಾಲೆಗಳಿಗೆ ಹೋಗಬೇಕಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಎಸ್.ಡಿ.ಎಂ.ಸಿ ಸಭೆಯಲ್ಲಿ ಚರ್ಚಿಸಿ 2023-24ನೇ ಸಾಲಿನಲ್ಲಿ 6ನೇ ತರಗತಿಗೆ ಉನ್ನತೀಕರಿಸಲು ನಿರ್ಣಯ ಕೈಗೊಂಡು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿರುತ್ತಾರೆ. ಅದರಂತೆ ಮಾನ್ಯ ಉಪ ನಿರ್ದೇಶಕರು, ಮಂಗಳೂರು ಇವರು ಸದರಿ ಶಾಲೆಯನ್ನು 6ನೇ ತರಗತಿಗೆ ಉನ್ನತೀಕರಿಸಬಹುದೆಂದು ತಮ್ಮ ಅಭಿಪ್ರಾಯದೊಂದಿಗೆ ಅನುಮತಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗತ ವರ್ಷದಿಂದಲೇ 6ನೇ ತರಗತಿ ಆರಂಭ ಮಾಡುವಂತೆ ಇಲಾಖೆಗೆ ಆದೇಶ ನೀಡುವಂತೆ ಸಚಿವರಿಗೆ ನೀಡಿದ ಮನವಿಯಲ್ಲಿ ವಿವರಿಸಿದ್ದಾರೆ.

See also  ಡೆಂಗ್ಯೂಗೆ 6 ವರ್ಷದ ಬಾಲಕಿ ದುರಂತ ಅಂತ್ಯ..! 4 ಲಕ್ಷ ರೂ. ಖರ್ಚು ಮಾಡಿದ್ರು ಉಳಿಸಿಕೊಳ್ಳಲಾಗಲಿಲ್ಲ ಎಂದು ತಂದೆ ಕಣ್ಣೀರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget