ಕರಾವಳಿಪುತ್ತೂರು

ಕೊಯಿಲ ಫಾರ್ಮ್ ಪಾಳುಬಿದ್ದ ಜಾಗದಲ್ಲಿ ಫಾರಂ ನಿರ್ಮಾಣ, ಪಶುಸಂಗೋಪನಾ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

46
Spread the love

ನ್ಯೂಸ್‌ ನಾಟೌಟ್‌ ಪುತ್ತೂರು: ಪ್ರತ್ತೂರು ತಾಲೂಕಿನ ಕೊಯಿಲ ಗ್ರಾಮದ ಪಾಳು ಬಿದ್ದಿರುವ 680 ಎಕರೆ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗದಲ್ಲಿ ಪಿ.ಪಿ.ಪಿ. ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ ಆಧಾರದ ಮೇಲೆ ಪೌಲ್ಟ್ರಿ ಫಾರಂ, ಕುರಿ ಸಾಕಾಣಿಕೆ, ಹಂದಿ ಸಾಕಾಣಿಕೆ, ಮತ್ತು ಹಸು ಸಾಕಾಣಿಕೆ ಮಾಡಲು ಅವಕಾಶ ಕಲ್ಪಿಸುವಂತೆ ಅಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಪಶುಸಂಗೋಪನಾ ಸಚಿವ ವೆಂಕಟೇಶ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ (ಜೂ. 22 ) ಸಚಿವರನ್ನು ಭೇಟಿಯಾದ ಶಾಸಕರು ಈ ಮನವಿ ಸಲ್ಲಿಸಿದ್ದು, ಪರಿಸರದಲ್ಲಿ ಸುಮಾರು 680 ಎಕರೆ ಜಾಗ ಪಶು ಸಂಗೋಪನೆ ಇಲಾಖೆಗೆ ಸೇರಿದ್ದು, ಯಾವುದೇ ಉಪಯೋಗಕ್ಕೆ ಬಾರದೆ ಪಾಳು ಬಿದ್ದಿರುತ್ತದೆ. ಈ ಜಾಗದಲ್ಲಿ ಪಿ.ಪಿ.ಪಿ, ಮಾದರಿಯಲ್ಲಿ ಪೌಲ್ಟ್ರಿ ಫಾರಂ, ಕುರಿ ಸಾಕಾಣಿಕೆ, ಹಂದಿ ಸಾಕಾಣಿಕೆ ಮತ್ತು ಹಸು ಸಾಕಾಣಿಕೆ ಮಾಡಲು ಅನುಕೂಲವಾಗುವಂತೆ ತಾವುಗಳು ನೋಡಲ್ ಅಧಿಕಾರಿಯನ್ನು ನೇಮಿಸಿ, ಕೂಡಲೇ ಪ್ರಕ್ರಿಯೆ ಪ್ರಾರಂಭಿಸಿದಲ್ಲಿ ಗುತ್ತಿಗೆ ಆಧಾರದ ಮೇಲೆ ಪಡೆಯಲು ಹೆಚ್ಚಿನ ಖಾಸಗಿ ಸಂಸ್ಥೆಗಳು ಆಸಕ್ತರಾಗಿರುತ್ತಾರೆ. ಇದರಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ ಹಾಗೂ ಪಿ.ಪಿ.ಪಿ. ಮಾದರಿಯಿಂದ ಸರ್ಕಾರಕ್ಕೆ ಕಂದಾಯವು ಸಹ ಸಂಗ್ರಹವಾಗುತ್ತದೆ. ಪಾಳು ಬಿದ್ದಿರುವ ಜಾಗವೂ ಉಪಯೋಗವಾಗುತ್ತದೆ. ಆದುದರಿಂದ ತಾವು ಕೂಡಲೇ ಕ್ಷೇತ್ರ ಅಭಿವೃದ್ಧಿಗೆ ಸಹಕಾರ ನೀಡುವಂತೆ ಸಂಬಂಧಪಟ್ಟವರಿಗೆ ಆದೇಶಿಸುವಂತೆ ಸಚಿವರಿಗೆ ನೀಡಿದ ಮನವಿಯಲ್ಲಿ ವಿವರಿಸಿದ್ದಾರೆ.

See also  ಮಡಿಕೇರಿ: ಬಾರ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ,ಯುವಕನ ಮರ್ಮಾಂಗಕ್ಕೆ ಹೊಡೆದು ಕೊಲೆ,ಕಣ್ಣೀರಲ್ಲಿ ಕುಟುಂಬ
  Ad Widget   Ad Widget   Ad Widget   Ad Widget