ಕ್ರೈಂಬೆಂಗಳೂರುರಾಜಕೀಯ

ಶಾಸಕನಿಂದ ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಆರೋಪ..! ಮುನಿರತ್ನ ವಿರುದ್ಧ ಮತ್ತೊಂದು FIR ದಾಖಲು..!

ನ್ಯೂಸ್ ನಾಟೌಟ್: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಇತ್ತೀಚೆಗಷ್ಟೆ ಜೈಲುವಾಸ ಅನುಭವಿಸಿ ಹೊರಬಂದಿದ್ದರು. ಈಗ ಮತ್ತೆ ಹೊಸ ಪ್ರಕರಣ ಸುದ್ದಿಯಾಗುತ್ತಿದೆ, ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಮುನಿರತ್ನ ಹಾಗೂ ಇತರ ಆರು ಜನ, ಕಟ್ಟಡ ನಿರ್ಮಾಣ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದು, ತಾತ್ಕಾಲಿಕ ಶೆಡ್‌ಗಳನ್ನು ಕೆಡವಿದ್ದಾರೆ ಮತ್ತು ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ 20 ವರ್ಷದ ದಿನಗೂಲಿ ಕಾರ್ಮಿಕ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು, ಶಾಸಕ ಮುನಿರತ್ನ ಮತ್ತು ಅವರ ಆಪ್ತರಾದ ವಸಂತಕುಮಾರ್, ಚೆನ್ನಕೇಶವ, ನವೀನ್, ಶ್ರೀರಾಮ, ಪೀಣ್ಯ ಕಿಟ್ಟಿ ಮತ್ತು ಪೀಣ್ಯ ಗಂಗಾ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಪೀಣ್ಯದ ಎಸ್‌ ಆರ್‌ಎಸ್ ವೃತ್ತದ ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಏಕಾಏಕಿ ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಶಾಸಕ ಮುನಿರತ್ನ ತಮ್ಮ ಸಹಚರರೊಂದಿಗೆ ಕೊಳೆಗೇರಿಗೆ ಜೆಸಿಬಿಗಳೊಂದಿಗೆ ಆಗಮಿಸಿ ತಾತ್ಕಾಲಿಕ ಶೆಡ್‌ ಗಳನ್ನು ಕೆಡವಿದರು. ಸ್ಥಳೀಯ ನಿವಾಸಿಗಳು ಈ ಕ್ರಮವನ್ನು ಪ್ರಶ್ನಿಸಿದರು. ಆದರೆ ಮುನಿರತ್ನ ಅವರನ್ನು ನಿಂದಿಸಲು ಪ್ರಾರಂಭಿಸಿದರು ಮತ್ತು ಉತ್ತರ ಕರ್ನಾಟಕದ ನಿಮ್ಮ ನಿಮ್ಮ ಊರುಗಳಿಗೆ ತೆರಳುವಂತೆ ಸೂಚಿಸಿದರು. ಕೆಲವು ಮಹಿಳೆಯರಿಗೆ ಒದೆಯುವ ಮೂಲಕ ಹಲ್ಲೆ ನಡೆಸಿದ್ದಾರೆ ಎಂದು ಎಫ್‌ಐಆರ್‌ ನಲ್ಲಿ ತಿಳಿಸಲಾಗಿದೆ.

ಶಾಸಕ ಮತ್ತು ಇತರ ಆರು ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯಡಿಯಲ್ಲಿ ಇತರ ದೌರ್ಜನ್ಯ ತಡೆ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Click

https://newsnotout.com/2025/01/it-raid-on-telugu-cinema-producers-kannada-news-viral-news-d/
https://newsnotout.com/2025/01/bus-incident-kananda-news-bengaluru-viral-news-arrested/
https://newsnotout.com/2025/01/kannada-news-duplicate-number-plate-viral-news-vehicle/
https://newsnotout.com/2025/01/naxal-in-chattisghar-viral-encounter-kannada-news-df/
https://newsnotout.com/2025/01/darshan-actor-kannada-news-darshan-police-gun-licence/
https://newsnotout.com/2025/01/kodagu-elephant-issue-canteen-viral-news-d/

Related posts

ಜಗತ್ತಿನಲ್ಲಿ ಕೆಟ್ಟ ತಾಯಿ ಇಲ್ಲ ಎಂಬ ಮಾತಿಗೆ ಲೋಪ ಇವಳು, ಹೆತ್ತ ಕುಡಿಯನ್ನೇ ಕೊಂದ ಪಾಪಿ ತಾಯಿ

ಪ್ರೀತಿ ತಿರಸ್ಕರಿದ ಮಹಿಳೆ, ದೇಹವನ್ನು ತುಂಡುಗಳಾಗಿ ಕತ್ತರಿಸಿ ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಹೂತಿಟ್ಟ ಪಾಗಲ್ ಪ್ರೇಮಿ!

ಲಾಡ್ಜ್ ನಲ್ಲಿ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ