Latestಕ್ರೈಂರಾಜಕೀಯ

ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂ.ಎಲ್.​ಸಿ ಯ ಸಂಬಂಧಿಯಿಂದ ಗುಂಡಿನ ದಾಳಿ..! ಕಲ್ಲು ಕ್ವಾರಿ​ಗೆ ರಸ್ತೆ ನಿರ್ಮಾಣ ವಿರೋಧಿಸಿ ಪ್ರತಿಭಟಿಸುತ್ತಿದ್ದ ಸ್ಥಳೀಯರು..!

327
Pc Cr: TV 9 KANNADA

ನ್ಯೂಸ್ ನಾಟೌಟ್: ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ ​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಫೈರಿಂಗ್ ಮಾಡಿದ ಘಟನೆ ಇಂದು(ಎ.23) ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಘಟನೆ ನಡೆದಿದೆ.

ಗುಂಡು ತಗುಲಿ ಚಿಕನ್ ರವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲು ಕ್ವಾರಿ ಕ್ರಷರ್ ​ಗೆ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರು. ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಎಂಎಲ್ ​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಸಿನಿಮೀಯ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಸಕಲೇಶಕುಮಾರ್ ಅಟ್ಟಾಡಿಸಿ ಮೂರು ಸುತ್ತು ಗುಂಡು ಹಾರಿಸಿದ್ದು, ಒಂದು ಗುಂಡು ರವಿ ಅವರ ದೇಹದ ಒಳಗೆ ಹೊಕ್ಕಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ರವಿ ಅವರನ್ನು ದಾಖಲಿಸಲಾಗಿದೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕುಶಲ್ ಹಾಗೂ ದೀಪ್ತಿ ಎನ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಸಕಲೇಶಕುಮಾರ್ ​ನನ್ನು ಮಂಚೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಕಲೇಶ ಕುಮಾರ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಮಂಚೇನಹಳ್ಳಿ ಪೊಲೀಸ್ ಠಾಣೆ ಮುಂದೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
ಮಂಚೇನಹಳ್ಳಿ ಠಾಣೆಯಲ್ಲಿ ಎಸ್ ​ಪಿ ಕುಶಲ್​ ಚೌಕ್ಸೆ ಮೊಕ್ಕಾಂ ಹೂಡಿದ್ದು, ಸ್ಥಳೀಯ ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ.

ಅಪ್ರಾಪ್ತ ಆಟೋ ಚಲಾಯಿಸಿ ಅಪಘಾತ, ಪ್ರಾಧ್ಯಾಪಕ ಸಾವು..! ಆಟೋ ರಿಕ್ಷಾ ಮಾಲೀಕನಿಗೆ 1.41 ಕೋಟಿ ರೂ. ದಂಡ..!

See also  ಬಂಟ್ವಾಳ: ಆಟೋ ರಿಕ್ಷಾ ಕಳವು! ಪ್ರಕರಣ ದಾಖಲು
  Ad Widget   Ad Widget   Ad Widget   Ad Widget   Ad Widget   Ad Widget