ಕ್ರೈಂಬೆಂಗಳೂರು

ವಿದ್ಯಾರ್ಥಿಯ ಬದುಕು ಮುಗಿಸಿದ ಮೊಬೈಲ್‌ ಚಾರ್ಜರ್‌ ..! ಶಿಕ್ಷಣಕ್ಕಾಗಿ ಬೆಂಗಳೂರಿಗೆ ಬಂದಾತನ ದುರಂತ ಅಂತ್ಯ

235

ನ್ಯೂಸ್‌ ನಾಟೌಟ್‌: ಮಳೆಗಾಲದಲ್ಲಿ ಸ್ವಿಚ್‌ ಬೋರ್ಡ್, ಚಾರ್ಜರ್‌ ಪಾಯಿಂಟ್‌ ಬಳಸುವಾಗ ಮುನ್ನೆಚ್ಚರಿಕೆ ವಹಿಸಬೇಕು. ಸ್ವಲ್ಪ ಎಡವಿದರೂ ಜೀವಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಬೆಂಗಳೂರಿನ ಮಂಜುನಾಥ ನಗರದ ಪಿಜಿಯಲ್ಲಿ ವಿದ್ಯಾರ್ಥಿಯೋರ್ವ ಮೊಬೈಲ್‌ ಚಾರ್ಜ್ ಮಾಡುವ ಸಂದರ್ಭ ಚಾರ್ಜರ್‌ನಲ್ಲಿ ವಿದ್ಯುತ್‌ ಪ್ರವಾಹಿಸಿ ದುರಂತ ಸಾವಿಗೀಡಾಗಿದ್ದಾನೆ. ಮೃತ ವಿದ್ಯಾರ್ಥಿಯನ್ನು ಶ್ರೀನಿವಾಸ್ (24) ಎಂದು ಗುರುತಿಸಲಾಗಿದೆ.

ಶಿಕ್ಷಣಕ್ಕಾಗಿ ದೂರದ ಬೀದರ್‌ನಿಂದ ಬೆಂಗಳೂರಿಗೆ ಬಂದು ಸಾಫ್ಟ್‌ವೇರ್ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ್ ಶುಕ್ರವಾರ ರಾತ್ರಿ ಮೊಬೈಲ್ ಚಾರ್ಜ್ ಹಾಕಲು ಹೋದಾಗ ಎಲೆಕ್ಟ್ರಿಕ್ ಶಾಕ್ ಹೊಡೆದಿದ್ದು, ಚಾರ್ಜಿಂಗ್ ವೈರ್ ಅಥವಾ ಸ್ವಿಚ್ ಬೋರ್ಡ್‌ನಿಂದ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ಈತ ಬಳಸುತ್ತಿದ್ದ ಮೊಬೈಲ್‌ ಚಾರ್ಜರ್ ವೈರ್ ಕೂಡ ಡ್ಯಾಮೇಜ್ ಆಗಿತ್ತು ಎನ್ನಲಾಗಿದೆ. ವಿದ್ಯುತ್‌ ಶಾಕ್‌ನಿಂದ ಶ್ರೀ‌ನಿವಾಸ್‌ ನೆಲಕ್ಕೆ ಬಿದ್ದಿದ್ದು, ರಾತ್ರಿ ಪಿಜಿಯಲ್ಲಿ ಊಟದ ಸಮಯದಲ್ಲಿ ಪಕ್ಕದ ರೂಮ್‌ನ ವಿದ್ಯಾರ್ಥಿ ಊಟಕ್ಕೆ ಬಾ ಎಂದು ಕರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪಿಜಿ ಸಿಬ್ಬಂದಿ ತಕ್ಷಣ ಬಸವೇಶ್ವರ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

See also  ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ರಾಜಕೀಯ ಮುಖಂಡ ಅರೆಸ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget