ರಾಜಕೀಯರಾಜ್ಯವೈರಲ್ ನ್ಯೂಸ್

ರಕ್ತದಿಂದ ಮೋದಿ ಭಾವಚಿತ್ರ ಬಿಡಿಸಿದ ಅಭಿಮಾನಿ, ಇಂದು(ಎ.29) ಮೋದಿಗೆ ಉಡುಗೊರೆ ನೀಡಲಿರುವ ಕಲಾವಿದ

ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ೨ ನೇ ಹಂತದ ಮತದಾನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕದಲ್ಲಿ ಮಿಂಚಿನ ಸಂಚಾರ ನಡೆಸಿದ್ದಾರೆ.

ರವಿವಾರ (ಏ.28) ರಂದು ಬೆಳಗಾವಿ, ಶಿರಸಿ, ದಾವಣಗೆರೆ ಮತ್ತು ಹೊಸಪೇಟೆಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ ನರೇಂದ್ರ ಮೋದಿ ಇಂದು (ಏ.29) ಬಾಗಲಕೋಟೆಗೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಪಿ ಗದ್ದಿಗೌಡ ಮತ್ತು ವಿಜಯಪುರ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರವಾಗಿ ಮತಯಾಚಿಸಲಿದ್ದಾರೆ.

ಬಾಗಲಕೋಟೆಯಲ್ಲಿ ಬೃಹತ್​ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಜಮಖಂಡಿ ‌ಮೂಲದ ಆನಂದ‌ಭಾರತ ಎಂಬ ಮೋದಿ ಅಭಿಮಾನಿ ವಿಶೇಷ ಉಡುಗೊರೆ ನೀಡಲಿದ್ದಾರೆ ಎನ್ನಲಾಗಿದೆ. ಆನಂದ‌ಭಾರತ ತಮ್ಮ ರಕ್ತದಲ್ಲಿ ತಾಯಿ ಹೀರಾಬೆನ್ ಪುತ್ರ ನರೇಂದ್ರ ಮೋದಿ ಅವರಿಗೆ ಆಶೀರ್ವಾದ ಮಾಡುತ್ತಿರುವ ಭಾವಚಿತ್ರ ಬಿಡಿಸಿದ್ದಾರೆ. ಇದನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಲಿದ್ದಾರೆ ಎನ್ನಲಾಗಿದೆ.

Related posts

ಅಯೋಧ್ಯಾ ರಾಮನ ವಿಗ್ರಹ ಕೆತ್ತನೆಗೆ ಶಿಲೆ ದೊರೆತ ಕರ್ನಾಟಕದ ಈ ಸ್ಥಳದಲ್ಲಿ ಶ್ರೀರಾಮ ಮಂದಿರ ನಿರ್ಮಾಣ, ಜ.22ಕ್ಕೆ ಭೂಮಿ ಪೂಜೆ

ಇನ್ನೈದು ನಿಮಿಷ ತಡವಾಗಿದ್ದರೆ ಆ ಮಗು ಮಣ್ಣಿನಲ್ಲಿ ಮಣ್ಣಾಗುತ್ತಿತ್ತು..! ವೈದ್ಯರೇ ಮೃತಪಟ್ಟಿರುವುದಾಗಿ ಘೋಷಿಸಿದ 1.5 ವರ್ಷದ ಮಗು ಅಂತ್ಯಕ್ರಿಯೆಯ ವೇಳೆ ಬದುಕಿದ್ದು ಹೇಗೆ?

ಯುವತಿಯನ್ನ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ದಾಳಿ..! ಖಾಸಗಿ ಸಂಸ್ಥೆಯಲ್ಲಿ ಒಟ್ಟಿಗೆ ದುಡಿಯುತ್ತಿದ್ದ ಇಬ್ಬರು