ಕರಾವಳಿಕ್ರೈಂವೈರಲ್ ನ್ಯೂಸ್

ಮೂಡುಬಿದಿರೆ: ವಿದ್ಯಾರ್ಥಿನಿ ನಿಗೂಢ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್..! ಊರ ಪ್ರಿಯಕರನೊಂದಿಗೆ ಕೇರಳದಲ್ಲಿ ಮದುವೆ..!

ನ್ಯೂಸ್ ನಾಟೌಟ್: ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಈ ಬೆನ್ನಲ್ಲೇ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಮದುವೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ(ಫೆ.23) ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಲಭಿಸಿತ್ತು, ಬಳಿಕ ನಾಪತ್ತೆಯಾಗಿದ್ದಳು ಎನ್ನಲಾಗಿದೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಆದಿರಾ ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಪ್ರಿಯಕರನೂ ಬೈಂದೂರು ನಿವಾಸಿ ಎಂದು ಹೇಳಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಶ್ರೀ ಭಗವಾನ್ ಸಂಘದಿಂದ ಸಂಪಾಜೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ,ಗಣ್ಯರ ಉಪಸ್ಥಿತಿ

3 ವರ್ಷದ ಮಗು ನೀರಿನ ತೊಟ್ಟಿಗೆ ಬಿದ್ದು ದುರಂತ ಅಂತ್ಯ..! ಮನೆಯವರೆಲ್ಲ ನಮಾಜ್‌ ಮಾಡುತ್ತಿದ್ದ ವೇಳೆ ದುರ್ಘಟನೆ..!

ದರ್ಶನ್​ ನ್ಯಾಯಾಂಗ ಬಂಧನದ ಅವಧಿ ಸೆಪ್ಟೆಂಬರ್ 9ರ ವರೆಗೆ ವಿಸ್ತರಣೆ..! ಬಳ್ಳಾರಿ ಕಾರಾಗೃಹಕ್ಕೆ ಶಿಫ್ಟ್ ಮಾಡದಂತೆ ಆರೋಪಿಗಳಿಂದ ಕೋರ್ಟ್ ಗೆ ಮನವಿ..!