ಕರಾವಳಿ

ಉಪ್ಪಿನಂಗಡಿ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ,ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆಹಿಡಿದು ಹಲ್ಲೆಗೆ ಯತ್ನ

257

ನ್ಯೂಸ್ ನಾಟೌಟ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೋಲೀಸ್ ಗಿರಿ ಸದ್ದು ಮಾಡಿದೆ. ಮುಸ್ಲಿಂ ಸಮುದಾಯದ ವಿಧ್ಯಾರ್ಥಿಗಳ ಮೇಲೆ ಗುಂಪೊಂದು ತಡೆದು ನಿಲ್ಲಿಸಿ ಹಲ್ಲೆಗೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಪೋಲೀಸ್ ಠಾಣೆಯ ಬಾಜಾರು ಎಂಬಲ್ಲಿ ನಡೆದಿದೆ.

ವಾರದ ಹಿಂದೆ ಈ ಘಟನೆ ನಡೆದಿದ್ದು, ಇದೀಗ ಅದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಯುವತಿಯನ್ನು ತಡೆದು ನಿಲ್ಲಿಸಿದ ಗುಂಪೊಂದು ಅವರ ಮೇಲೆ ಹಲ್ಲೆಗೆ ಯತ್ನಿಸಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಘಟನೆಯ ವಿಡಿಯೋ ಲಭ್ಯವಾಗಿದ್ದು,ಸ್ಥಳದಲ್ಲಿ ಸಂಭಾಷಣೆ ನಡೆಸಿದ್ದು ಕೂಡ ರೆಕಾರ್ಡ್‌ ಆಗಿದೆ.ಘಟನೆಗೆ ಸಂಬಂಧಿಸಿ ವಿಧ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಹಲ್ಲೆಗೆ ಯತ್ನಿಸಿದ ಆರೋಪಿಗಳು ಪರಾರಿಯಾಗಿದ್ದು, ಉಪ್ಪಿನಂಗಡಿ ಪೋಲೀಸರು ತನಿಖೆ ಮುಂದುವರೆಸಿದ್ದಾರೆ.

See also  ಸುಳ್ಯ:ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಬೆಳ್ಳಾರೆ ಠಾಣೆಯಲ್ಲಿ ಮುಸ್ಲಿಂ ಮುಖಂಡನೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget