ಕರಾವಳಿಕ್ರೈಂಪುತ್ತೂರು

ಬೆಳ್ಳಂ ಬೆಳಗ್ಗೆ NIA ಶಾಕ್: ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡದ 16 ಕಡೆ ದಾಳಿ, ಮಹತ್ವದ ಮಾಹಿತಿ ಸಂಗ್ರಹ

266

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಬುಧವಾರ ಮುಂಜಾನೆ NIA ದಾಳಿ ನಡೆದಿದೆ. ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಮೊದಲಾದೆಡೆ ದಾಳಿನಡೆಸಿದ ಎನ್ಐಎ ಅಧಿಕಾರಿಗಳ ತಂಡ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವು ಪಡೆದು NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಒಟ್ಟು 16 ಕಡೆ NIA ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ದಾಳಿ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ NIA ತಂಡ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿತ್ತು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಬಂಧಿಸಿದ್ದರು. ಅಲ್ಲದೆ ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನು NIA ಅಧಿಕಾರಿಗಳು ಬಂಧಿಸಿದ್ದರು. ದಾಳಿ ಸಂದರ್ಭದಲ್ಲಿ ಹಲವು ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದ್ದ ಬಗ್ಗೆ ದಾಖಲೆಗಳನ್ನು ಪತ್ತೆಹಚ್ಚಿದ್ದರು.

See also  'ಫಸ್ಟ್‌ ನೈಟ್‌'ಗೆ ರೆಡಿಯಾಗಿದ್ದ ಗಂಡನಿಗೆ ರಾಖಿ ಕಟ್ಟಿದ ಪತ್ನಿ! ಏನಿದು ವಿಚಿತ್ರ ಪ್ರಕರಣ?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget