Latestಕ್ರೈಂರಾಜ್ಯವೈರಲ್ ನ್ಯೂಸ್

ಅತ್ತೆ-ಸೊಸೆ ಜಗಳಕ್ಕೆ ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ..! 8 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಭರತ್ ಸಾವು..!

1.1k
Pc Cr: Public Tv
Spread the love

ನ್ಯೂಸ್ ನಾಟೌಟ್: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.
ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ.

ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು.

ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ ಪಂಚಾಯ್ತಿ ಮಾಡಿದ್ದರು. ಆದರೂ ಭರತ್ ಪತ್ನಿ ಗಂಡನ ಜೊತೆ ಇರದೇ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದಿದ್ದ ಭರತ್ ಹಾಗೂ ತಾಯಿ ಜಯಂತಿ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

See also  ವೇದಿಕೆ ಮೇಲೆ ಕೋಳಿ ಕತ್ತರಿಸಿ ರಕ್ತ ಕುಡಿದ ಕಲಾವಿದ..! ಹಲವು ದಿನಗಳ ಬಳಿಕ ಎಫ್.ಐ.ಆರ್ ದಾಖಲು..!
  Ad Widget   Ad Widget   Ad Widget