Latestಕ್ರೈಂವೈರಲ್ ನ್ಯೂಸ್

ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ..! ಗಂಡನ ಅನೈತಿಕ ಸಂಬಂಧದ ಬಗ್ಗೆ ಡೆತ್ ​ನೋಟ್ ​ನಲ್ಲಿ ಬರೆದಿಟ್ಟ ಮಹಿಳೆ..!

1.2k
Spread the love

ನ್ಯೂಸ್ ನಾಟೌಟ್: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್​ ನಡೆದಿದೆ. ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ.

ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು ರೋಷಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಟವಾಡಲು ಹೊರಹೋಗಿದ್ದ ಪುತ್ರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆಗೆ ಮುನ್ನ ಶ್ರುತಿ ಡೆತ್​ನೋಟ್ ಬರೆದಿಟ್ಟಿದ್ದು, ಡೆತ್​ನೋಟ್​ನಲ್ಲಿ ಗಂಡ ಪರಸ್ತ್ರಿಯೊಂದಿಗಿನ ಅನೈತಿಕ ಸಂಬಂಧದ ಹೊಂದಿರುವ ಬಗ್ಗೆ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:17ರ ಬಾಲಕಿ ಮೇಲೆ ಅತ್ಯಾಚಾರ..! ಮೃತ ವ್ಯಕ್ತಿಯ ವಿರುದ್ಧ ಕೇಸ್‌ ದಾಖಲು..!

10 ವರ್ಷದ ಹಿಂದೆ ಶ್ರುತಿ ಚಾರ್ಟರ್ಡ್ ಅಕೌಂಟೆಂಟ್ ಜತೆ ಮದುವೆಯಾಗಿದ್ದರು. ಅಲ್ಲದೇ ಶ್ರುತಿ ಗ್ರಾಮ ಪಂಚಾಯಿತಿ ಒಂದರ ಅಧ್ಯಕ್ಷೆಯಾಗಿದ್ದು, ಒಂದು ಹೆಣ್ಣು ಮತ್ತು ಒಂದು ಗಂಡು ಮಗು ಇದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಶ್ರುತಿ, ಪುತ್ರಿ ರೋಹಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣಿಗೆ ಶರಣಾಗಿದ್ದಾರೆ. ಇನ್ನು ಗಂಡು ಮಗು ಆಟವಾಡಲು ಮನೆಬಿಟ್ಟು ಆಚೆ ಹೋಗಿದ್ದರಿಂದ ಆ ಕಂದ ಬಚಾವ್ ಆಗಿದೆ.

ಇದನ್ನೂ ಓದಿ:ಕರ್ನಾಟಕದ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ, ವೇತನ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಡೆತ್ ನೋಟ್ ಬರೆದಿಟ್ಟು ಪತಿ ವಿವಾಹೇತರ ಸಂಬಂಧದ ಬಗ್ಗೆ ಉಲ್ಲೇಖಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು, ಬಾಗಲಗುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತ ಶ್ರುತಿ ಗಂಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

 

See also  ಪದೇ-ಪದೆ ರೈಲುಗಳ ಹಳಿ ತಪ್ಪಿಸಲು ಯತ್ನ..! ರೈಲ್ವೇ ಹಳಿಯ ಮೇಲೆ ಅಡುಗೆ ಸಿಲಿಂಡರ್..! ಬಾಲಾಪರಾಧಿಗಳು ವಶಕ್ಕೆ..!
  Ad Widget   Ad Widget   Ad Widget