ಕ್ರೈಂ

ಹೆತ್ತು-ಹೊತ್ತು ಸಾಕಿದ ತಾಯಿಯನ್ನೇ ಅತ್ಯಾಚಾರಗೈದ ಮಗ..!

ಪುತ್ತೂರು: ಹೆತ್ತು ಹೊತ್ತು ಸಾಕಿ ಸಲಹಿದ ತಾಯಿಯನ್ನೇ ಮಗ ಅತ್ಯಾಚಾರಗೈದ ಘಟನೆ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ.

ಕೆದಂಬಾಡಿ ಕುರಿಕ್ಕಾರದ ಜಯರಾಮ ರೈ ಅತ್ಯಾಚಾರ ಎಸಗಿರುವ ಆರೋಪಿ. 58 ವರ್ಷದ ತನ್ನ ತಾಯಿಯೊಂದಿಗೆ ವಾಸವಾಗಿರುವ ಜಯರಾಮ ಜ.12ರಂದು ಎಂದಿನಂತೆ ರಾತ್ರಿ ಊಟ ಮಾಡಿ ಅವರ ರೂಮ್ ನಲ್ಲಿ ಮಲಗಿದ್ದ. ಮುಂಜಾನೆ 3 ಗಂಟೆಯ ವೇಳೆಗೆ ತಾಯಿ ಮಲಗಿದ್ದ ರೂಮ್ ಗೆ ಹೋಗಿ ಜಯರಾಮ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ತಾಯಿ ಆತನನ್ನು ತಳ್ಳಿ ಬೊಬ್ಬೆ ಹಾಕಿದಾಗ ಆತ ತಾಯಿಯ ಬಾಯಿಯನ್ನು , ಬಟ್ಟೆಯಿಂದ ಒತ್ತಿ ಹಿಡಿದು ಬೊಬ್ಬೆ ಹಾಕದಂತೆ ಬೆದರಿಕೆ ಹಾಕಿ ತಾಯಿ ಪ್ರತಿಭಟಿಸಿದರೂ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಈ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಂದು ಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಜ.13ರಂದು ಬೆಳಗ್ಗೆ 07.45ಕ್ಕೆ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಜಯರಾಮ ಬಲವಂತದಿಂದ ಅವರನ್ನು ಮನೆಯ ಹಾಲ್ ಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಕೇಸು ದಾಖಲಿಸಲಾಗಿದೆ.

Related posts

ಟಿಪ್ಪರ್ – ರಿಕ್ಷಾ ಭೀಕರ ಅಪಘಾತ: ಪಿಯುಸಿ ವಿದ್ಯಾರ್ಥಿನಿ ಬಲಿ

‘ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ನಡೆದಿಲ್ಲ’ ಮಕ್ಕಳ ವಿಶೇಷ ನ್ಯಾಯಾಲಯ ಅಭಿಪ್ರಾಯ

ಬಿಗ್‌ ಬಾಸ್‌ ಖ್ಯಾತಿಯ ಡ್ರೋನ್ ಪ್ರತಾಪ್ ಅರೆಸ್ಟ್..! ವಿಚಾರಣೆ ನಡೆಸುತ್ತಿರುವ ಪೊಲೀಸರು..!