ರಾಜ್ಯ

ಮುಡಾ ಹಗರಣ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ; ಸಿದ್ದರಾಮಯ್ಯ ಅವರ ಮುಂದಿನ ನಡೆ ಏನು..?

ನ್ಯೂಸ್‌ ನಾಟೌಟ್‌: ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ಮುಳುವಾಗುವ ಸಾಧ್ಯತೆ ಹೆಚ್ಚಾಗಿದೆ. ಮುಡಾ ಹಗರಣದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಪ್ರಾಸಿಕ್ಯೂಶನ್‌ಗೆ ಅನುಮತಿ ಕೇಳಿದ್ದರು. ದೂರುದಾರ ಅಬ್ರಹಾಂ ಅವರನ್ನು ಶನಿವಾರ (ಆ.17) ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರಾಸಿಕ್ಯೂಶನ್‌ಗೆ ದೂರು ದಾಖಲಿಸಲು ಅನುಮತಿ ನೀಡಿದರು.

ಕಳೆದ ಒಂದು ವಾರದಿಂದ ರಾಜಭವನದ ನಡೆ ನಿಗೂಢವಾಗಿತ್ತು. ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಯಾವ ಕ್ರಮ ಜರುಗಿಸಲಿದ್ದಾರೆ ಎಂಬ ಕುತೂಹಲವಿತ್ತು. ದಿಲ್ಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್‌ ಕಳೆದ ವಾರ ಬೆಂಗಳೂರಿಗೆ ಮರಳಿದ ಬಳಿಕ, ತಾವು ಕೊಟ್ಟಿದ್ದ ನೋಟಿಸ್‌ಗೆ ರಾಜ್ಯ ಸಚಿವ ಸಂಪುಟದ ಉತ್ತರ ಹಾಗೂ ಸಿಎಂ ಸಿದ್ದರಾಮಯ್ಯ ನೀಡಿದ್ದ ಉತ್ತರಗಳನ್ನು ಪರಿಶೀಲಿಸಿದ್ದರು. ದೂರುದಾರ ಟಿ.ಜೆ ಅಬ್ರಾಹಂ ಮೇಲೆಯೇ ದೂರುಗಳಿವೆ ಎಂದು ಸಚಿವ ಸಂಪುಟ ಆರೋಪಿಸಿತ್ತು. ಮುಡಾ ಹಗರಣದ ವಿಚಾರಣೆಗಾಗಿ ರಾಜ್ಯ ಸರಕಾರ ನ್ಯಾ| ದೇಸಾಯಿ ಅವರ ಆಯೋಗವನ್ನು ರಚಿಸಿದೆ.

ಜೊತೆಗೆ ಮೈಸೂರಿನ ಸ್ನೇಹಮಯಿ ಕೃಷ್ಣ ಎಂಬವರು ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದರು. ಅಕ್ರಮ ಭೂ ಡಿನೋಟಿಫಿಕೇಶನ್‌ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿದ್ದರು. ಜಿಲ್ಲಾಧಿಕಾರಿಯಿಂದ 15 ದಿನದಲ್ಲಿ ವರದಿ ಪಡೆದು ಸೂಕ್ತ ಕ್ರಮ ಜರಗಿಸುವಂತೆ ಕೋರಿದ್ದಾರೆ. ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ರಾಜ್ಯಪಾಲರು ಗಮನಿಸಿದ್ದರು.

ಇತ್ತ ಸಿಎಂ ಸಿದ್ದರಾಮಯ್ಯ ಅವರ 10 ಜನರ ಕಾನೂನು ಟೀಮ್ ಫುಲ್ ಆಕ್ಟೀವ್ ಆಗಿದೆ. ರಾಜ್ಯಪಾಲರ ನಡೆ ಪ್ರಶ್ನೆ ಮಾಡಿ ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನಪ್ರತಿನಿಧಿಗಳ ಹಾಗೂ ಲೋಕಾಯುಕ್ತ ಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ವರೆಗೂ ಹೋಗಲು ವಕೀಲರ ಟೀಮ್ ರೆಡಿಯಾಗಿದೆ. ಮತ್ತೊಂದೆಡೆ ಈ ಪ್ರಕರಣವನ್ನು ಪ್ರತಿಷ್ಠೆಯ ಪ್ರಶ್ನೆಯಾಗಿ ತೆಗೆದುಕೊಂಡಿದ್ದ ಬಿಜೆಪಿ- ಜೆಡಿಎಸ್‌, ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದವು.

Related posts

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಇನ್ನಿಲ್ಲ, ಹೃದಯಾಘಾತಕ್ಕೆ ಬಲಿ

ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಸೃಷ್ಟಿಸಲು ಮುಂದಾದ ಕೆ.ಎಸ್.ಈಶ್ವರಪ್ಪ..! 1008 ಸಾಧು ಸಂತರ ಪಾದ ಪೂಜೆಯ ಮೂಲಕ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ..!

3 ಮಕ್ಕಳನ್ನು ಬಾಡಿಗೆ ಮನೆಯಲ್ಲಿ ಬಿಟ್ಟು ಪ್ರಿಯಕರನೊಂದಿಗೆ ಆಕೆ ಪರಾರಿ..! 25 ವರ್ಷದ ಯುವಕನ ಜೊತೆ 40ರ ಮಹಿಳೆಯ ಲವ್ವಿಡವ್ವಿ..!