ಕ್ರೈಂ

ಮುಲ್ಕಿ: ರೈಲು ಡಿಕ್ಕಿ, ಮಹಿಳೆ ಗೆ ಗಂಭೀರ ಗಾಯ

877

ಮುಲ್ಕಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಮಹಿಳೆಯೊಬ್ಬರಿಗೆ ರೈಲು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮಹಿಳೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಇಬ್ರಾಹಿಂ ಎಂಬುವವರ ‌ ಮಗಳು ಸಕೀನಾ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮುಲ್ಕಿ ರೈಲು ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಸಕೀನಾ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆಗೆ ಗಂಭೀರ ಸ್ವರೂಪದ ಗಾಯವಾಗಿದೆ. ರೈಲ್ವೆ ಇಲಾಖೆಯ ಪೊಲೀಸರು ಹಾಗೂ ಮೂಲ್ಕಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಪೊಲೀಸರ ಎದುರಲ್ಲೇ ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ..! 8 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು
  Ad Widget   Ad Widget   Ad Widget   Ad Widget   Ad Widget   Ad Widget   Ad Widget