ಬೆಂಗಳೂರುರಾಜಕೀಯರಾಜ್ಯವಿಡಿಯೋವೈರಲ್ ನ್ಯೂಸ್

ಶಾಸಕನನ್ನು 2 ದಿನ ಪೊಲೀಸ್‌ ಕಸ್ಟಡಿಗೆ ನೀಡಿದ ಕೋರ್ಟ್..! ತಲೆಮರೆಸಿಕೊಳ್ಳಲು ಆಂಧ್ರಕ್ಕೆ ತೆರಳುತ್ತಿರುವಾಗ ಮಾರ್ಗ ಮಧ್ಯೆ ಮುನಿರತ್ನ ಅರೆಸ್ಟ್..! ಇಲ್ಲಿದೆ ವೈರಲ್ ಆಡಿಯೋ

230

ನ್ಯೂಸ್ ನಾಟೌಟ್: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ(ಸೆ.14) ಸಂಜೆ ಶಾಸಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧಿಸಿ ಶನಿವಾರ ಸಂಜೆ ವೇಳೆಗೆ ಬೆಂಗಳೂರಿಗೆ ಕರೆತಂದಿದ್ದರು. ಅಶೋಕ ನಗರ ಠಾಣೆಗೆ ಕರೆತಂದಿದ್ದ ಇಲ್ಲಿನ ಪೊಲೀಸರು ಬಳಿಕ ಯಲಹಂಕದ ಕೋಗಿಲೆ ಕ್ರಾಸ್ ಬಳಿ ಇರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದರು. ಎಸಿಪಿ ಪ್ರಕಾಶ್ ನೇತೃತ್ವದ ತಂಡ ಶಾಸಕರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿತ್ತು.

ಈ ವೇಳೆ ಪೊಲೀಸರು ಒಂದು ವಾರ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದ್ರೆ ವಿಚಾರಣೆ ನಡೆಸಿದ ಬಳಿಕ, 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಶಾಸರನ್ನು ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ್ದ ವೇಳೆ ಬೆಂಬಲಿಗರೂ ಅಲ್ಲಿ ಜಮಾಯಿಸಿದ್ದರು. ಬಂಧನ ಖಂಡಿಸಿ ಸ್ಥಳದಲ್ಲೇ ಧಿಕ್ಕಾರ ಕೂಗಿದ ಘಟನೆ ನಡೆದಿದೆ.

See also  ಇಸ್ರೋ ಇಂದು(ಮೇ.18) ಉಡಾವಣೆ ಮಾಡಿದ ಉಪಗ್ರಹ ಕಕ್ಷೆ ಸೇರುವಲ್ಲಿ ವಿಫಲ..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget