ಕ್ರೈಂ

ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಗ್ರಾಮದ ಐವರ ಕೊಲೆ

335
Spread the love

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್‌ ಗ್ರಾಮದಲ್ಲಿ ಒಂದೇ ಕುಟುಂಬದ ಐವರ ಕೊಲೆಯಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರು ಮಕ್ಕಳು, ಮಹಿಳೆಯನ್ನು ಹತ್ಯೆಗೈದಿದ್ದಾರೆ. ಲಕ್ಷ್ಮೀ(26), ರಾಜ್(12), ಕೋಮಲ್(7), ಕುನಾಲ್(4), ಗೋವಿಂದ(8) ಕೊಲೆಯಾದವರು. ಸ್ಥಳಕ್ಕೆ ಕೆಆರ್ಎಸ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಭೀಕರ ಕೃತ್ಯಕ್ಕೆ ಕೆಆರ್ಎಸ್ ಗ್ರಾಮ ಬೆಚ್ಚಿಬಿದ್ದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಲಕ್ಷ್ಮೀ ಪತಿ ಗಂಗಾರಾಮ್ 10 ದಿನದ ಹಿಂದೆ ವ್ಯಾಪಾರಕ್ಕೆ ಹೋಗಿದ್ದರು. ಗಂಗಾರಾಮ್ ಪ್ಲಾಸ್ಟಿಕ್ ಹೂವು ಸೇರಿ ಹಲವು ವಸ್ತುಗಳ ಮಾರಾಟ ಮಾಡುತ್ತಿದ್ದರು. ಒಮ್ಮೆ ವ್ಯಾಪಾರಕ್ಕೆ ಹೋದರೆ 15 ದಿನ, 1 ತಿಂಗಳು ಬಿಟ್ಟು ಬರುತ್ತಿದ್ದರು. ಗಂಗಾರಾಮ್ ಅಣ್ಣ ಗಣೇಶ್ ಪತ್ನಿ ಚಂಪಾಡಿ ಸಹಾ ವ್ಯಾಪಾರಕ್ಕೆ ತೆರಳಿದ್ದರು. ಇವರೆಲ್ಲಾ ಒಟ್ಟಿಗೆ ವಾಸವಾಗಿದ್ದರು. ಮಧ್ಯರಾತ್ರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಈ ವಿಚಾರ ಬೆಳಕಿಗೆ ಬಂದಿದೆ.

See also  ಎರಡನೇ ಪತ್ನಿಯ ಹಠಕ್ಕಾಗಿ ಮಗನನ್ನೇ ಕೊಂದ ತಂದೆ! 7 ವರ್ಷದ ಮಗನ ಬಗ್ಗೆ ಆಕೆಗೆ ಅಷ್ಟೊಂದು ದ್ವೇಷವೇಕೆ?
  Ad Widget   Ad Widget   Ad Widget   Ad Widget   Ad Widget   Ad Widget