ಕ್ರೈಂವೈರಲ್ ನ್ಯೂಸ್

ಮುರುಘಾ ಶ್ರೀ ಮಾದರಿಯಲ್ಲೇ ಮತ್ತೊಬ್ಬ ಸ್ವಾಮೀಜಿ ಅರೆಸ್ಟ್..! ಆತ ಸ್ವಾಮೀಜಿಯ ಬಗ್ಗೆ ಬಾಯ್ಬಿಟ್ಟ ರಹಸ್ಯವೇನು..?

238

ನ್ಯೂಸ್ ನಾಟೌಟ್: ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ನಂತರ ತುಮಕೂರಿನ ಮತ್ತೊಬ್ಬ ಸ್ವಾಮೀಜಿ ಅರೆಸ್ಟ್ ಅದೇ ರೀತಿಯಲ್ಲಿ ಬಂಧನವಾಗಿದ್ದಾರೆ. ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲಮಂಜುನಾಥ್ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು. ಅದೇ ರೀತಿ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಹಂಗರಹಳ್ಳಿಯ ಶ್ರೀ ವಿದ್ಯಾ ಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ‌ ಮಂಜುನಾಥ ಸ್ವಾಮೀಜಿ ವಿರುದ್ಧ ಕೂಡ ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ಆರೋಪ ಮೇಲೆ ಅರೆಸ್ಟ್ ಆಗಿದ್ದಾರೆ ಎಂದು ವರದಿ ತಿಳಿಸಿದೆ.

ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಿ, ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಹಂಗರನಹಳ್ಳಿ ಶ್ರೀ ವಿದ್ಯಾಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ‌ ಮಂಜುನಾಥ ಸ್ವಾಮೀಜಿ ದೂರು ಸಲ್ಲಿಸಿದ್ದರು. ಆದರೆ, ಅದೇ ಆರೋಪಿಗಳು ಸ್ವಾಮೀಜಿಯವರ ಬೇರೊಂದು ಹಗರಣವೊಂದನ್ನು ವಿಚಾರಣೆ ವೇಳೆ ಬಯಲು ಮಾಡಿದ್ದಾರೆ. ಹಾಗಾಗಿ, ಪೊಲೀಸರು ಸ್ವಾಮೀಜಿಯನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ.

ಬಾಲ ಮಂಜುನಾಥ ಸ್ವಾಮೀಜಿ ಅಭಿಷೇಕ್ ಎನ್ನುವ ವ್ಯಕ್ತಿಗೆ ತಮಗೆ ಚರ್ಮ ರೋಗದ ಸಮಸ್ಯೆ ಕುರಿತಂತೆ ಹೇಳಿಕೊಂಡಿದ್ದರು. ಅಭಿಷೇಕ್ ಮಹಿಳೆಯನ್ನು ಪರಿಚಯಿಸಿ ವೈದ್ಯ ಎಂದು ಹೇಳಿದ್ದ. ಮಹಿಳೆಗೆ ಚರ್ಮ ರೋಗ ತೋರಿಸಲು ಸ್ವಾಮೀಜಿಗೆ ಇಷ್ಟವಿಲ್ಲದ ಕಾರಣ ಅವರ ಮೊಬೈಲ್ ಗೆ ಫೋಟೋ ಕಳುಹಿಸಿದ್ದರು. ವ್ಯಾಧಿಯ ಬಗ್ಗೆ ವೈದ್ಯರ ಬಳಿ ಹೇಳಿಕೊಳ್ಳಲು ಸ್ವಾಮೀಜಿಗೆ ವೀಡಿಯೋ ಕಾಲ್ ನಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಆಗ, ಸ್ವಾಮೀಜಿಯವರು ಚರ್ಮ ವ್ಯಾಧಿಯಿರುವ ಜಾಗವನ್ನು ತೋರಿಸಿದ್ದರು.

ಅದೇ ವೀಡಿಯೋವನ್ನು ರೆಕಾರ್ಡ್ ಮಾಡಿಕೊಂಡು ಅಭಿಷೇಕ್ ಹಾಗೂ ಮತ್ತಿತರರು ಸ್ವಾಮೀಜಿಯವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೆಂದು ಮಠದ ದೇವಸ್ಥಾನದ ಟ್ರಸ್ಟಿ ಕೆ. ಅಭಿಲಾಷ್ ಎಂಬುವರು ಪೊಲೀಸರಲ್ಲಿ ಫೆಬ್ರವರಿ 10 ರಂದು ದೂರು ದಾಖಲಿಸಿದ್ದರು. ಇದೀಗ ದೇವಸ್ಥಾನದ ಟ್ರಸ್ಟಿ ಅಭಿಲಾಷ್ ನೀಡಿದ್ದ ದೂರಿನನ್ವಯ ಪೊಲೀಸರು ಅಭಿಷೇಕ್ ರನ್ನು ಕರೆಯಿಸಿ ವಿಚಾರಣೆ ನಡೆಸಿದಾಗ ಆತ ಹೇಳಿದಂತೆ, ಸ್ವಾಮೀಜಿಯವರು ಹಲವು ದಿನಗಳ ಹಿಂದೆ ಮಠದಲ್ಲಿ ಅಪ್ರಾಪ್ತೆಯೊಬ್ಬಳಿಗೆ ಲೈಂಗಿಕ ಕಿರುಕುಳ ಕೊಟ್ಟಿರುವುದಾಗಿ ಆರೋಪಿಸಿದ್ದ. ಈ ವಿಚಾರ ಪೋಕ್ಸೋ ಕಾಯ್ದೆಯಡಿ ಬರುವುದರಿಂದ ಮಠಕ್ಕೆ ಆಗಮಿಸಿದ ಪೊಲೀಸರು, ಕಳೆದ ರಾತ್ರಿ ಮಠದಲ್ಲಿ ಪರಿಶೀಲನೆ ನಡೆಸಿದ್ದರು. ಆಗ ಸಿಕ್ಕ ಕೆಲವು ದಾಖಲೆಗಳನ್ನು ಆಧರಿಸಿ, ಸ್ವಾಮೀಜಿಯವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

See also  ಮಡಿಕೇರಿ:ಭೀಕರ ಬೈಕ್ ಅಪಘಾತ,ಕಾಲೇಜ್ ವಿದ್ಯಾರ್ಥಿನಿ ದಾರುಣ ಅಂತ್ಯ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget