ನ್ಯೂಸ್ ನಾಟೌಟ್: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 10ರ ವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಬಿ.ಕೆ. ಕೋಮಲಾ ಅವರು ಆರೋಪಿ ಸಂಖ್ಯೆ 2, ಹಾಸ್ಟೆಲ್ ವಾರ್ಡನ್ ರಶ್ಮಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಸಹ ಅಕ್ಟೋಬರ್ 10 ರವರೆಗೆ ವಿಸ್ತರಿಸಿದ್ದಾರೆ. ಆರೋಪಿಯ ನ್ಯಾಯಾಂಗ ಬಂಧನ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಶ್ರೀಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್ ಅಕ್ಟೋಬರ್ 10ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ನಂತರ ಶ್ರೀಗಳನ್ನು ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.