ರಾಜಕೀಯವೈರಲ್ ನ್ಯೂಸ್

ಸಿಎಂ ಮುಸ್ಲಿಮರ ಓಲೈಕೆ ಮಾಡುತ್ತಿರುವುದು ಶೋಭೆಯಲ್ಲ..! ಬಿ.ಎಸ್.ಯಡಿಯೂರಪ್ಪ ಸಿದ್ದರಾಮಯ್ಯ ಬಗ್ಗೆ ಹೀಗೆ ಹೇಳಿದ್ದೇಕೆ? ಮಾಜಿ ಸಚಿವ ಸೋಮಣ್ಣ ಬಿಜೆಪಿ ಬಿಡುವ ಬಗ್ಗೆ ಬಿಎಸ್.ವೈ ಹೇಳಿದ್ದೇನು?

ನ್ಯೂಸ್ ನಾಟೌಟ್: ಮುಸ್ಲಿಂ ಸಮುದಾಯಕ್ಕೆ ಅನುದಾನ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ಮಾಜಿ ಸಿಎಂ ಬಿ.ಎಸ್.​ ಯಡಿಯೂರಪ್ಪ ಟೀಕಿಸಿದ್ದಾರೆ. ಅವರು ರಾಜ್ಯದ ಸಿಎಂ ಆಗಿದ್ದುಕೊಂಡು ಒಂದು ಸಮುದಾಯವನ್ನು ಓಲೈಕೆ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಬಿಎಸ್ ವೈ ಹೇಳಿದ್ದಾರೆ.

ಸಿದ್ದರಾಮಯ್ಯ ಒಬ್ಬ ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರರಿಗೆ ಹಣ ಕೊಡಲು ಅಭ್ಯಂತರವಿಲ್ಲ. ಆದರೆ, ಹಣದ ಹೆಸರಲ್ಲಿ ಅಲ್ಪಸಂಖ್ಯಾತರ ಓಲೈಕೆ ಮಾಡ್ತಿರೋದು ತರವಲ್ಲ. ಈ ಹೇಳಿಕೆ ಹಿಂದೂಗಳ ಆಕ್ರೋಶಕ್ಕೆ ಅವಕಾಶ ಮಾಡಿಕೊಡುತ್ತದೆ. ಈ‌ ರೀತಿ ಮಾತುಗಳನ್ನು ಸಿಎಂ ಅವರಿಂದ ನಿರೀಕ್ಷೆ ‌ಮಾಡಿರಲಿಲ್ಲ. ಈಗಾಗಲೇ ಅವರ ಹೇಳಿಕೆಯನ್ನು ಮಠಾಧೀಶರು ಸೇರಿ ಎಲ್ಲೆಡೆಯಿಂದ ಖಂಡನೆ ವ್ಯಕ್ತವಾಗಿದೆ. ಏನಾದರೂ ಹೇಳುವಾಗ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲೇ ಚುನಾವಣೆ ಎದುರಿಸಲಿದ್ದೇವೆ. ಅವರ ಹೆಸರಿನಲ್ಲಿ ನೂರಕ್ಕೆ ನೂರು ಪ್ರತಿಶತ ಗೆಲುವು ಪಡೆಯುತ್ತೇವೆ. ಯಾವುದೇ ಅನುಮಾನ ಬೇಡ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್​ನವರು ಓಲೈಕೆ ರಾಜಕಾರಣ ಮಾಡುವ ಮೂಲಕ ಚುನಾವಣೆ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿ ಇದ್ದರೆ, ಅದು ಸಾಧ್ಯವಿಲ್ಲ. ದೇಶದಲ್ಲಿ ಬಿಜೆಪಿ ಮತ್ತು ಮೋದಿ ಪರ ವಾತಾವರಣವಿದೆ. ನಾವು ಎಲ್ಲಾ ಕ್ಷೇತ್ರ ಗೆಲ್ಲಲು ಪ್ರಯತ್ನಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ಅಧಿವೇಶನ ನಡೆಯುತ್ತಿರುವ ಬೆಳಗಾವಿಯ ಸುವರ್ಣಸೌಧದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಪೋಟೋ ತೆಗೆಯುವ ವಿಚಾರ ಸರಿಯಲ್ಲ. ಸಾವರ್ಕರ್ ಭಾವಚಿತ್ರ ತೆಗೆಯುವ ಸಾಹಸಕ್ಕೆ ಸರ್ಕಾರ ಕೈ ಹಾಕಬಾರದು. ಇದು ಹೋರಾಟಗಾರರಿಗೆ ಮಾಡಿದ ಅವಮಾನ. ರಾಜ್ಯದ ಜನ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಮಾಜಿ ಸಚಿವ ಸೋಮಣ್ಣ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಬೇರೆ ಯಾವ ಪಕ್ಷಕ್ಕೂ ಅವರು ಹೋಗುವುದಿಲ್ಲ. ಅವರು ನಮ್ಮಲ್ಲೇ ಇರುತ್ತಾರೆ. ನಾನು‌ ಅವರ ಜೊತೆ ಮಾತನಾಡುತ್ತೇನೆ. ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಮಾರ್ಗದರ್ಶನ ಪಕ್ಷಕ್ಕೆ ಬೇಕಾಗುತ್ತದೆ. ಹೀಗಾಗಿ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ ಎನ್ನಲಾಗಿದೆ.

https://newsnotout.com/2023/12/police-station-and-intercaste-marriage-issue-bajarangadala/

Related posts

ವಿಪಕ್ಷಗಳ ಸಭೆಗೆ ಜೆಡಿಎಸ್‌ಗೆ ಆಹ್ವಾನ ನೀಡದ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿದ್ದೇನು? ಡಿಸಿಎಂ ಡಿ.ಕೆ. ಶಿ ಕೊಟ್ಟ ಸುಳಿವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಅಧಿಕ ಆದಾಯ ಇರುವ 32,092 ಕುಟುಂಬಗಳ ಬಳಿ ಬಿಪಿಎಲ್ ಕಾರ್ಡ್ ಪತ್ತೆ..! 392 ಸರ್ಕಾರಿ ನೌಕರರ ಬಳಿಯೂ ಬಿಪಿಎಲ್ ಕಾರ್ಡ್‌..! ತಪ್ಪಿತಸ್ಥರ ವಿರುದ್ಧ ನೋಟಿಸ್ ಜಾರಿ

ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ಸುಟ್ಟ ಮಕ್ಕಳು..! ಏನಿದು ಅಮಾನವೀಯ ಘಟನೆ..?